ತಿರುಚ್ಚಿ: ತಮಿಳುನಾಡಿನ ಕರೂರ್ ಜಿಲ್ಲೆಯ ಕುಳಿತ್ತಲೈ ಬಳಿ ರಾಜ್ಯ ಸಾರಿಗೆ ಸಂಸ್ಥೆ ಬಸ್ ಗೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬ ನಾಲ್ವರು ಸಾವನ್ನಪ್ಪಿದ್ದಾರೆ.
ತಂಜಾವೂರು ಜಿಲ್ಲೆಯ ಒರತನಾಡು ಸಮೀಪದ ಒಕ್ಕನಾಡು ಕೀಲಯೂರಿನ ದೇವಸ್ಥಾನವೊಂದಕ್ಕೆ ಚಾಲಕನೊಂದಿಗೆ ಒಂದೇ ಕುಟುಂಬದ ನಾಲ್ವರು ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.
ಕರೂರ್-ತಿರುಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಳಿತ್ತಲೈ ಬಳಿ ತಿರುಪುರ ಕಡೆಗೆ ಬರುತ್ತಿದ್ದ ತಮಿಳುನಾಡು ರಾಜ್ಯ ಸಾರಿಗೆ ಸಂಸ್ಥೆ ಬಸ್ ಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಬಸ್‌ನ ಕೆಳಭಾಗಕ್ಕೆ ನುಗ್ಗಿದ್ದು, ಸಂಪೂರ್ಣ ನಜ್ಜುಗುಜ್ಜಾಗಿದೆ.
ಅಪಘಾತದಲ್ಲಿ ಚಾಲಕ ಕೂಡ ಸಾವನ್ನಪ್ಪಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ ಒಂದು ಗಂಟೆಗೂ ಹೆಚ್ಚು ಕಾಲ ಹರಸಾಹಸಪಟ್ಟು ಅವಶೇಷಗಳಡಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.