ಸಾಂದರ್ಭಿಕ ಚಿತ್ರ
ಶಾಲಾ ಪ್ರವಾಸಕ್ಕೆಂದು ಹೋಗಿದ್ದ 14 ವರ್ಷ ಬಾಲಕನೋರ್ವ ಹೃದಯಾಘಾತದಿಂದ ಮೃತ ಪಟ್ಟಿರುವ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ನಡೆದಿದೆ.
ಆಯುಷ್ ಧರ್ಮೇಂದ್ರ ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.
ಮುಂಬೈನ ಪುರಸಭೆ ನಡೆಸುವ ಘನ್ನೋಲಿಯಲ್ಲಿರುವ ಶಾಲೆಯ ವಿದ್ಯಾರ್ಥಿಗಳನ್ನು ಖೋಪೋಲಿಯ ಇಮಾಜಿಕಾ ಥೀಮ್ ಪಾರ್ಕ್ಗೆ ಪ್ರವಾಸಕ್ಕೆ ಕರೆದೊಯ್ಯಲಾಗಿದೆ.
ಈ ವೇಳೆ ಆಯುಷ್ ಏಕಾಏಕಿ ಕುಸಿದು ಬಿದ್ದಿದ್ದಾನೆ. ಕೂಡಲೇ ಆತನನ್ನು ಅಲ್ಲೇ ಉದ್ಯಾನವನದಲ್ಲಿದ್ದ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ವೇಳೆ ಪರಿಶೀಲಿಸಿದ ವೈದ್ಯರು ಬಾಲಕ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಬಾಲಕನನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಈ ವೇಳೆ ಬಾಲಕ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.
ಮೃತನ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.