ಪುಣೆ: ‘ಶಿವ ಶಾಹಿ’ ಎಸಿ ಬಸ್ಸಿನಲ್ಲಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು 70 ಗಂಟೆಗಳ ಕಾಲ ನಡೆಸಿದ ಕಾರ್ಯಾಚರಣೆಯ ಬಳಿಕ ಕೊನೆಗೂ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ದತ್ತಾತ್ರೇಯ ರಾಮದಾಸ್ ಗಾಡೆಯ ಪತ್ತೆಗಾಗಿ 13 ತಂಡಗಳನ್ನು ರಚಿಸಿದ್ದ ಪೊಲೀಸರು, ಪುಣೆಯ ಶಿರೂರು ತಾಲೂಕಿನಲ್ಲಿ ಡ್ರೋನ್ ಮತ್ತು ಶ್ವಾನದಳದ ಸಹಾಯದಿಂದ ಹುಡುಕಾಟ ನಡೆಸಿ, ಬಳಿಕ ಆರೋಪಿಯೂ ತನ್ನ ಹುಟ್ಟೂರಾದ ಗುನಾತ್‌ನಲ್ಲಿರುವ ಕಬ್ಬಿನ ಗದ್ದೆಗಳಲ್ಲಿ ಅಡಗಿರಬಹುದು ಎಂದು ಶಂಕಿಸಲಾಗಿತ್ತು.
100 ಕ್ಕೂ ಹೆಚ್ಚು ಪೊಲೀಸರು ಗುನಾತ್‌ನಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.