ಕಟೀಲು: ಶ್ರೀ ದುರ್ಗಾಪರಮೇಶ್ವರಿಯ ಪರಮ ಭಕ್ತೆ, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕಟೀಲು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ತಾಯಿ ಸುನಂದಾ ಶೆಟ್ಟಿ, ತಂಗಿ ಶಮಿತಾ ಶೆಟ್ಟಿ ಮತ್ತು ಮಕ್ಕಳ ಜೊತೆ ಕ್ಷೇತ್ರಕ್ಕೆ ಭೇಟಿ ನೀಡಿದ ನಟಿ, ಆ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ.
ಮೂಲತಃ ತುಳುನಾಡಿನವರಾದ ಶಿಲ್ಪಾ ಶೆಟ್ಟಿ ತನ್ನ ಹುಟ್ಟೂರಿನ ಸಂಸ್ಕೃತಿಯನ್ನು ಮರೆತಿಲ್ಲ. ಮಂಗಳೂರು ಮಲ್ಲಿಗೆ ಮುಡಿದು ಶ್ರೀ ದೇವಿಯ ದರ್ಶನ ಪಡೆದು ಬಳಿಕ ಸಾಮಾಜಿಕ ಜಾಲತಾಣದಲ್ಲಿ ಫೋಟೋವನ್ನು ಹಂಚಿಕೊಂಡು ‘ಬ್ಯಾಕ್ ಹೋಮ್, ನಮ್ಮ ತುಳುನಾಡು’ ಎಂದು ಬರೆದಿದ್ದಾರೆ.
ಈ ಪೋಸ್ಟ್ ನೋಡಿದ ನಟಿ ಶಿಲ್ಪಾ ಶೆಟ್ಟಿಯ ಅಭಿಮಾನಿಗಳು ಖುಷಿಯಾಗಿದ್ದಾರೆ.