ಚಾಮರಾಜನಗರ: ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿ ಐವರು ಸಾವನ್ನಪ್ಪಿದ ಘಟನೆ ನಡೆದಿದೆ.
ಟಿಪ್ಪರ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರು ಸೇರಿ ಐವರು ಸ್ಥಳದಲ್ಲೇ ಅಸುನೀಗಿದ್ದಾರೆ.
ಮೃತರು ಕಾರಲ್ಲಿ ಮಹಾ ಶಿವರಾತ್ರಿ ಜಾತ್ರೆ ಹಿನ್ನೆಲೆ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದರು ಎಂದು ಹೇಳಲಾಗಿದೆ.
ಹನೂರು ಕಡೆಯಿಂದ ಬಂದ ಖಾಲಿ ಟಿಪ್ಪರ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಬಳಿಕ ಎರಡೂ ವಾಹನಗಳು ರಸ್ತೆ ಬದಿ ಪಲ್ಟಿಯಾಗಿವೆ.
ಮೃತರ ವಿವರವನ್ನು ಪೊಲೀಸರು ಕಲೆ ಹಾಕುತ್ತಿದ್ದು, ಅಪಘಾತದ ಬಳಿಕ ಟಿಪ್ಪರ್ ಚಾಲಕ ಪರಾರಿಯಾಗಿದ್ದಾನೆ.