ಬೆಳ್ತಂಗಡಿ: ಬೆಳ್ತಂಗಡಿ ವಕೀಲರ ಸಂಘದ ಹಲವಾರು ವರ್ಷಗಳ ಬೇಡಿಕೆ ಈಡೇರುವ ಸೂಚನೆ ಸರ್ಕಾರದಿಂದ ದೊರಕಿದೆ. ಬೆಳ್ತಂಗಡಿಯ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣಕ್ಕೆ ಶೀಘ್ರವೇ ಅನುದಾನ ಬಿಡುಗಡೆ ಮಾಡಲು ಕ್ರಮ ವಹಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿ ಹೊಳಿ ಭರವಸೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಮೂಲಕ ಹಳೆಯ ಶಿಥಿಲಾವಾಸ್ಥೆಯಲ್ಲಿರುವ ಬೆಳ್ತಂಗಡಿ ನ್ಯಾಯಾಲಯಕ್ಕೆ ಹೊಸ ಕಟ್ಟಡದ ವಕೀಲರ ಬೇಡಿಕೆಗೆ ಸ್ಪಂದನೆ ಸಿಕ್ಕಂತಾಗಿದೆ.
ಕಳೆದ ಹಲವಾರೂ ವರ್ಷಗಳಿಂದ ಹೊಸ ನ್ಯಾಯಾಲಯದ ಸಂಕೀರ್ಣ ಮಂಜೂರುಗೊಳಿಸುವಂತೆ ಬೆಳ್ತಂಗಡಿ ವಕೀಲರ ಸಂಘ ವಿವಿಧ ರೀತಿಯಲ್ಲಿ ಸರ್ಕಾರ ಹಾಗೂ ಜನಪ್ರತಿನಿಧಿಗಳಿಗೆ ಮನವಿ ನೀಡಿ ಹೊಸ ನ್ಯಾಯಾಲಯದ ಬೇಡಿಕೆ ಇಟ್ಟಿದ್ದರು. ಇದೀಗ ಸರ್ಕಾರ ಈ ಬಗ್ಗೆ ಸ್ಪಂದಿಸಿದ್ದು, ವಕೀಲರ ಸಂಘ ಸಂತಸ ವ್ಯಕ್ತಪಡಿಸಿದೆ. , ವಿಧಾನ ಪರಿಷತ್ ಶಾಸಕ ವಕೀಲರ ಸಂಘದ ಸದಸ್ಯ ಪ್ರತಾಪ್ ಸಿಂಹ ನಾಯಕ್ ಅವರು ಅಧಿವೇಶನದಲ್ಲಿ ಈ ಬಗ್ಗೆ ಸರ್ಕಾರದ ಗಮನ ಸೆಳೆದಾಗ ಕ್ರಮ ಕೈಗೊಳ್ಳುವ ಬಗ್ಗೆ ಸಚಿವರು ತಿಳಿಸಿದ್ದಾರೆ.