ಬೆಳ್ತಂಗಡಿ:ಸಮಾಜ ಮುಖಿ ಸೇವಾ ಯೋಜನೆಗಳ ಮೂಲಕ ಗುರುತಿಸಿಕೊಂಡಿರುವ ಅಖಿಲ ಕರ್ನಾಟಕ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಎಪ್ರಿಲ್ 06 ರಂದು ಕೊತ್ತಲಿಗೆ ಕ್ರಿಕೆಟ್ ಪಂದ್ಯಾಟವು ಬೆಳ್ತಂಗಡಿ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಲಿದೆ. ಬೆಳಿಗ್ಗೆ 9 ಗಂಟೆಗೆ ಗಣ್ಯರ ಉಪಸ್ಥಿತಿಯಲ್ಲಿ ಪಂದ್ಯಾಟ ಉದ್ಘಾಟನೆಗೊಳ್ಳಲಿದೆ.
ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ. ಕ್ರಿಕೆಟ್ ಪಂದ್ಯಾಟವು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಕಾರದಲ್ಲಿ ನಡೆಯಲಿದೆ. ಎಂದು ರಾಜಕೇಸರಿ ಸ್ಥಾಪಕಾಧ್ಯಕ್ಷ ದೀಪಕ್. ಜಿ. ಮಾಹಿತಿ ನೀಡಿದ್ದಾರೆ.