ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘ, ಮಹಿಳಾ ಹಾಗೂ ಯುವ ವಿಭಾಗದ ಆಶ್ರಯದಲ್ಲಿ ತಾಲೂಕು ಮಟ್ಟದ ಬಂಟ ಕ್ರೀಡೋತ್ಸವ ನಾಳೆ ಗುರುವಾಯನಕೆರೆ ಶಕ್ತಿನಗರದ ನವಶಕ್ತಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಬೆಳಿಗ್ಗೆ 9 ಗಂಟೆಗೆ ಜಯಂತ ಶೆಟ್ಟಿ ಭಂಡಾರಿಗುಡ್ಡೆ ಅಧ್ಯಕ್ಷತೆಯಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದ್ದು,
ಪಥ ಸಂಚಲನದ ಉದ್ಘಾಟನೆಯನ್ನು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಅಭಿಷೇಕ್ ಎಂ. ಶೆಟ್ಟಿ ಮಾಡಲಿದ್ದಾರೆ. ಉದ್ಯಮಿಗಳಾದ ಶಶಿಧರ್ ಶೆಟ್ಟಿ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ಶಾಸಕ ಹರೀಶ್ ಪೂಂಜ, ಮುನಿಯಾಲು ಉದಯ ಕುಮಾರ್ ಶೆಟ್ಟಿ ಸೇರಿದಂತೆ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಂಜೆ 5.30 ಕ್ಕೆ ಸಮಾರೋಪ ಸಮಾರಂಭದಲ್ಲಿ ಶಶಿಧರ್ ಶೆಟ್ಟಿ ಬಹುಮಾನ ವಿತರಣೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹೇಮನಾಥ ಶೆಟ್ಟಿ, ಚಂದ್ರಹಾಸ. ಶೆಟ್ಟಿ, ಅಜಿತ್ ಜಿ. ಶೆಟ್ಟಿ, ರಾಜೇಶ್ ಶೆಟ್ಟಿ ಸೇರಿದಂತೆ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ. ವಿವಿಧ ಕ್ರೀಡಾ ಸಾಧಕರಿಗೆ ಸನ್ಮಾನ ಹಾಗೂ ಬಂಟ ಬಾಂಧವರಿಗೆ ವಿವಿಧ ಕ್ರೀಡಾಕೂಟವು ನಡೆಯಲಿದೆ.