ದೆಹಲಿ: ಜಮ್ಮು- ಪಹಲ್ಗಾಮ್ ಹತ್ಯಾಕಾಂಡಕ್ಕೆ ಪ್ರತೀಕಾರವಾಗಿ ಭಾರತ ನಡೆಸಿದ ದಾಳಿಗೆ ತತ್ತರಿಸಿದ ಪಾಕಿಸ್ತಾನ ಕದನ ವಿರಾಮ ಯಾಚಿಸಿದೆ. ಇದನ್ನು ಭಾರತವೂ ಒಪ್ಪಿಕೊಂಡಿದ್ದು, ಕಳೆದ 4 ದಿನಗಳಿಂದ ನಡೆಯುತ್ತಿದ್ದ ಸಂಘರ್ಷ ತಕ್ಷಣದಿಂದಲೇ ನಿಂತಿದೆ.
ಸಂಘರ್ಷಕ್ಕೆ ಕದನ ವಿರಾಮ ನೀಡಿದ್ದಾಗಿ ಭಾರತ ಮತ್ತು ಪಾಕಿಸ್ತಾನ ಘೋಷಿಸಿವೆ. ಇದಕ್ಕೂ ಮೊದಲು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಉಭಯ ರಾಷ್ಟ್ರಗಳ ನಡುವೆ ಮಾತುಕತೆ ನಡೆಸಲಾಗಿತ್ತು. ಎರಡೂ ರಾಷ್ಟ್ರಗಳು ಬುದ್ಧಿವಂತಿಕೆ ಪ್ರದರ್ಶಿಸಿ ಸಂಘರ್ಷಕ್ಕೆ ಅಂತ್ಯ ಹಾಡಿವೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಘೋಷಿಸಿದ್ದರು.