ಬೆಳ್ತಂಗಡಿ: ಪಿಕಪ್ ವಾಹನವೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ, ಗೇರು ಕಟ್ಟೆ ಬಳಿ ಶನಿವಾರ ರಾತ್ರಿ ನಡೆದಿದೆ.ಮೃತ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ಬಸ್ ಚಾಲಕ ಸುಕೇಶ್ ಶೆಟ್ಟಿ ಎಂದು ಗುರುತಿಸಲಾಗಿದೆ.
ಗುರುವಾಯನಕೆರೆ ಉಪ್ಪಿನಂಗಡಿ ರಸ್ತೆಯ ಗೇರುಕಟ್ಟೆ ಸಮೀಪದ ಪೆಟ್ರೋಲ್ ಪಂಪ್ ಬಳಿ ಖಾಸಗಿ ಬಸ್ ನಲ್ಲಿ ಚಾಲಕ ವೃತ್ತಿ ಮಾಡುತಿದ್ದ. ಗೇರುಕಟ್ಟೆ ಅಶ್ವತ್ಥ ನಗರ ಸಮೀಪದ ಸುಕೇಶ್ ಶೆಟ್ಟಿ ಎಂಬವರು ಎಂದಿನಂತೆ ಶನಿವಾರ ರಾತ್ರಿ ಕರ್ತವ್ಯ ಮುಗಿಸಿ ಮನೆಗೆ ಗುರುವಾಯನಕೆರೆಯಿಂದ ಉಪ್ಪಿನಂಗಡಿ ರಸ್ತೆಯಲ್ಲಿ ಬೈಕಿನಲ್ಲಿ ಹೋಗುತಿದ್ದ ವೇಳೆ ಉಪ್ಪಿನಂಗಡಿ ಕಡೆಯಿಂದ ಅತೀ ವೇಗವಾಗಿ ಬಂದ ಪಿಕಪ್ ವಾಹನ ಬೈಕಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಗಂಭೀರ ಗಾಯಗೊಂಡ ಅವರನ್ನು ಸ್ಥಳೀಯರ ಸಹಕಾರದಲ್ಲಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅದರೆ ಅಲ್ಲಿ ಅವರು ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತ ನಡೆಸಿ ಪಿಕಪ್ ಚಾಲಕ ಸ್ಥಳದಿಂದ ಪರಾರಿಯಾಗಿರುವುದಾಗಿ ತಿಳಿದು ಬಂದಿದೆ.ಈ ಬಗ್ಗೆ ಬೆಳ್ತಂಗಡಿ ಟ್ರಾಪಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.