ಮಂಗಳೂರು: ದಶಮಾನೋತ್ಸವ ಸಂಭ್ರಮದಲ್ಲಿರುವ “ಯಕ್ಷಧ್ರುವ
ಪಟ್ಲ ಫೌಂಡೇಶನ್ ಇದರ ವಿವಿಧ ಸೇವಾ ಯೋಜನೆಗಳಿಗೆ ಸಮಿತಿಯ ಅಧ್ಯಕ್ಷ ಶಶಿಧರ್ ಶೆಟ್ಟಿ ಅವರ ವಿಶೇಷ ವಿನಂತಿಯಂತೆ ಉದ್ಯಮಿಗಳಾದ ಕನ್ಯಾನ ಸದಾಶಿವ ಶೆಟ್ಟಿ ಯವರು ರೂ 3 ಕೋಟಿ ದೇಣಿಗೆಯನ್ನು ಘೋಷಿಸಿದ್ದಾರೆ.
ಕನ್ಯಾನ ಸದಾಶಿವ ಶೆಟ್ಟಿಯವರು ಫೌಂಡೇಶನ್ ಗೌರವಾಧ್ಯಕ್ಷರಾದ ನಂತರ ಟ್ರಸ್ಟಿನ ಕಾರ್ಯಯೋಜನೆಗಳು ವಿಶೇಷ ರೀತಿಯಲ್ಲಿ ಸಾಗುತಿದ್ದು ಎಲ್ಲರ ಪ್ರಶಂಸೆಗೆ ಕಾರಣವಾಗಿದೆ.
ಫೆಬ್ರವರಿಯಲ್ಲಿ ಮಂಗಳೂರಿನ ಗೋಲ್ಡ್ ಪಿಂಚ್ ಹೋಟೇಲಿನಲ್ಲಿ ನಡೆದ ಪಟ್ಲ ದಶಮ ಸಂಭ್ರಮದ ಸಮಾಲೋಚನಾ ಸಭೆಯಲ್ಲಿ ಫೌಂಡೇಶನ್ ನ ಎಲ್ಲಾ ಮಹಾದಾನಿಗಳು, ಮತ್ತು ಫೌಂಡೇಶನ್ ನ ಪದಾಧಿಕಾರಿಗಳ ಸಮ್ಮುಖದಲ್ಲಿ ಪಟ್ಲ ದಶಮಾನೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಡಾ. ಕೆ. ಪ್ರಕಾಶ್ ಶೆಟ್ಟಿ ಬಂಜಾರ , ಅಧ್ಯಕ್ಷರಾಗಿ ಶಶಿಧರ ಶೆಟ್ಟಿ ಬರೋಡ ಅವರನ್ನು ಆಯ್ಕೆ ಮಾಡಲಾಯಿತು. ಈ ವೇಳೆ ಅಧ್ಯಕ್ಷ ಶಶಿಧರ್ ಶೆಟ್ಟಿಯವರು ದಶಮಾನೋತ್ಸವದ ಮುಖ್ಯ ಧ್ಯೇಯವಾಗಿ ಕನಿಷ್ಠ 10 ಕೋಟಿ ರೂಪಾಯಿ ಈ ವರ್ಷ ದೇಣಿಗೆ ಸಂಗ್ರಹ ಮಾಡುವ ಬಗ್ಗೆ ಎಲ್ಲಾ ದಾನಿಗಳಲ್ಲಿ ಮನವಿ ಮಾಡಿಕೊಂಡರು.
ಅದರಂತೆ ಬರೋಡ ಶಶಿಧರ ಶೆಟ್ಟಿಯವರ ವಿಶೇಷ ಮನವಿಗೆ ಸ್ಪಂದಿಸಿದ ಸದಾಶಿವ ಶೆಟ್ಟಿ ಅವರು ಫೌಂಡೇಶನ್ ಗೆ ಮೂರು ಕೋಟಿ ದೇಣಿಗೆಯನ್ನು ಘೋಷಿಸಿದ್ದಾರೆ. ಈ ವೇಳೆ ದೇಣಿಗೆ ನೀಡಿದ ಸದಾಶಿವ ಶೆಟ್ಟಿಯವರಿಗೆ ಸಮಿತಿಯ ಗೌರವಾಧ್ಯಕ್ಷ ಪ್ರಕಾಶ್ ಶೆಟ್ಟಿ, ಅಧ್ಯಕ್ಷ ಶಶಿಧರ್ ಶೆಟ್ಟಿ ಸೇರಿದಂತೆ ಎಲ್ಲಾ ಪದಾಧಿಕಾರಿಗಳು ಕೃತಜ್ಞತೆ ಸಲ್ಲಿಸಿದ್ದಾರೆ.