ಬೆಳ್ತಂಗಡಿ: ತಾಲೂಕಿನಲ್ಲಿ ನಲ್ಲಿ ಸುಸಜ್ಜಿತ ಮಿನಿ ವಿಧಾನ ಸೌಧ ಇದ್ದರೂ ಕಂದಾಯ ನಿರೀಕ್ಷಕರ ಕಛೇರಿ ಖಾಸಗಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದನ್ನು ತಾಲೂಕು ಆಡಳಿತ ಸೌಧಕ್ಕೆ ಶಿಫ್ಟ್ ಮಾಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ಹೇಳಿದರು. ಬೆಳ್ತಂಗಡಿಯಲ್ಲಿ ಕಂದಾಯ ನಿರೀಕ್ಷಕರ ಕಛೇರಿ ಖಾಸಗಿ ಕಟ್ಟಡದಲ್ಲಿ ಬಾಡಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತಿದ್ದು, ಎಲ್ಲಾ ಇಲಾಖೆಗಳು ಒಂದೇ ಕಟ್ಟಡದಲ್ಲಿ ಸಾರ್ವಜನಿಕ ಸೇವೆಗೆ ಇರಬೇಕೆಂಬ ಉದ್ದೇಶದಿಂದ ಮಿನಿ ವಿಧಾನ ಸೌಧ ಇದ್ದರೂ ಕಂದಾಯ ನಿರೀಕ್ಷಕರ ಕಛೇರಿ ಮಾತ್ರ ಇನ್ನೂ ಕೂಡ ಖಾಸಗಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ.
ಅದಲ್ಲದೇ ಲಂಚ ನೀಡದೇ ಯಾವುದೇ ಕೆಲಸವನ್ನು ಅಧಿಕಾರಿಗಳು ಸಮರ್ಪಕವಾಗಿ ಸರಿಯಾದ ಸಮಯಕ್ಕೆ ಮಾಡುತ್ತಿಲ್ಲ, ಬ್ರೋಕರ್ ಗಳ ಹಾವಳಿ ಹೆಚ್ಚಾಗಿದೆ ಎಂಬ ದೂರುಗಳು , ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿರುವ ಬಗ್ಗೆ ಪತ್ರಕರ್ತರು ಪತ್ರಿಕಾಗೋಷ್ಠಿಯಲ್ಲಿ ಅವರ ಗಮನಕ್ಕೆ ತಂದಾಗ ಪ್ರತಿಕ್ರಿಯೆ ನೀಡಿದ ಅವರು ಖಾಸಗಿ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿರುವುದು ನನ್ನ ಗಮನಕ್ಕೆ ಬಂದಿರಲಿಲ್ಲ ,ಈ ಬಗ್ಗೆ ಜಿಲ್ಲಾಧಿಕಾರಿಗಳಲ್ಲಿ ಮಾಹಿತಿ ಪಡೆದು ತಾಲೂಕು ಆಡಳಿತ ಸೌಧಕ್ಕೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲು ಸೂಚಿಸಲಾಗುವುದು,ಅದೇ ರೀತಿ ಸಾರ್ವಜನಿಕರ ದೂರಿನ ಬಗ್ಗೆಯೂ ಗಮನಕ್ಕೆ ತರಲಾಗುವುದು ಎಂದರು.ಪತ್ರಿಕಾಗೋಷ್ಠಿಯಲ್ಲಿ
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ,
ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಅಧ್ಯಕ್ಷ ಸತೀಶ್ ಕಾಶಿಪಟ್ಣ,
ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ,
ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್,
ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಕೆ.ಕೆ. ಸಾಹುಲ್ ಹಮೀದ್,
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಉಸ್ತುವಾರಿ ಸುರೇಶ್ ಕುಮಾರ್
ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಉಸ್ತುವಾರಿ ಉಷಾ ಅಂಜನ್,
ಕಣಿಯೂರು ಜಿಲ್ಲಾ ಪಂಚಾಯತ್ ಉಸ್ತುವಾರಿ ಜಯವಿಕ್ರಂ ಕಲ್ಲಾಪು,
ಪ್ರವೀಣ್ ಹಳ್ಳಿ ಮನೆ ಉಪಸ್ಥಿತರಿದ್ದರು.