ಬೆಳ್ತಂಗಡಿ : ಪಂಜಾಬ್ ನಲ್ಲಿ ಧರ್ಮಸ್ಥಳ ಬೊಳಿಯಾರ್ ನಿವಾಸಿ ಸುರೇಂದ್ರ ನಾಯರ್ ಮತ್ತು ಸಿಂಧೂದೇವಿ ದಂಪತಿಗಳ ಎರಡನೇ ಪುತ್ರಿ ಏರೋಸ್ಪೇಸ್ ಇಂಜಿನಿಯರ್ ಆಗಿ ಡೆಲ್ಲಿಯಲ್ಲಿ ಉದ್ಯೋಗದಲ್ಲಿದ್ದ ಆಕಾಂಕ್ಷ ಎಸ್ ನಾಯರ್(22) ಪಂಜಾಬ್ ನಲ್ಲಿ ಕಾಲೇಜ್ ಕಟ್ಟಡದಿಂದ ಮೇ.17 ರಂದು ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ಸಂಬಂಧ ಆಕಾಂಕ್ಷ ಮೃತದೇಹ ಮೇ.21 ರಂದು ಬೆಳಗ್ಗೆ 9 ಗಂಟೆಗೆ ಬೆಂಗಳೂರು ವಿಮಾನ ನಿಲ್ದಾಣದಿಂದ ಆಂಬುಲೆನ್ಸ್ ಮೂಲಕ ಧರ್ಮಸ್ಥಳದ ಬೊಳಿಯರ್ ಗೆ ತೆಗೆದುಕೊಂಡು ಬಂದಿದ್ದಾರೆ.ಮನೆಯಲ್ಲಿ ಅಂತಿಮ ವಿದಿವಿಧಾನ ನಡೆದು ಅಂತ್ಯಕ್ರಿಯೆ ನಡೆಯಲಿದೆ.