ಶಾಸಕ ಹರೀಶ್ ಪೂಂಜ ವಿರುದ್ದದ ಪ್ರಕರಣಕ್ಕೆ ಹೈಕೊರ್ಟ್ ತಡೆ: ವಿಚಾರಣೆಯನ್ನು ಜೂ 18 ಕ್ಕೆ ಮುಂದೂಡಿದ ನ್ಯಾಯಾಲಯ:

 

 

 

ಬೆಳ್ತಂಗಡಿ: ತೆಕ್ಕಾರು ದೇವಸ್ಥಾನದ ಕಾರ್ಯಕ್ರಮದ ಧಾರ್ಮಿಕ ಸಭೆಯಲ್ಲಿ ಕೋಮು ಧ್ವೇಷದ ಭಾಷಣ ಮಾಡಿದ್ದಾರೆ ಎಂಬ ಆರೋಪದಲ್ಲಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್‌ ಪೂಂಜಾ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ಮತ್ತು ಅದಕ್ಕೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆಗೆ ಹೈಕೋರ್ಟ್‌ ಗುರುವಾರ ತಡೆಯಾಜ್ಞೆ ನೀಡಿದೆ.

ಪ್ರಕರಣ ಸಂಬಂಧ ತಮ್ಮ ವಿರುದ್ಧದ ಎಫ್‌ಐಆರ್‌ ರದ್ದು ಕೋರಿ ಶಾಸಕ ಪೂಂಜಾ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್‌.ರಾಚಯ್ಯ ಅವರಿದ್ದ ಪೀಠ ಈ ಆದೇಶ ಮಾಡಿ, ವಿಚಾರಣೆಯನ್ನು ಜೂ.18ಕ್ಕೆ ಮುಂದೂಡಿತು.

ಅರ್ಜಿದಾರರ ವಿರುದ್ಧದ ದಾಖಲಾಗಿರುವ ಇತರೆ ಮೂರು ಎಫ್‌ಐಆರ್‌ಗಳಿಗೆ ಹೈಕೋರ್ಟ್‌ ಈಗಾಗಲೇ ತಡೆಯಾಜ್ಞೆ ನೀಡಿದೆ. ಅದನ್ನು ಪರಿಗಣಿಸಿ ಈ ಪ್ರಕರಣ ಸಂಬಂಧ ಮುಂದಿನ ಎಲ್ಲಾ ಪ್ರಕ್ರಿಯೆಗಳಿಗೆ ತಡೆಯಾಜ್ಞೆ ನೀಡಲಾಗುತ್ತಿದೆ ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.

error: Content is protected !!