ಬೆಂಗಳೂರು: ಇಂಜನೀಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕಳೆದ ತಿಂಗಳಲ್ಲಿ ನಡೆಸಿದ ಸಿಇಟಿ ಪರೀಕ್ಷೆಯ ಫಲಿತಾಂಶ ಇಂದು (ಮೇ 24ರಂದು) ಪ್ರಕಟವಾಗಲಿದೆ. ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್ ಇಂದು ಬೆಳಗ್ಗೆ 11.30ಕ್ಕೆ ಫಲಿತಾಂಶದ ವಿವರಗಳನ್ನು ಬಹಿರಂಗಗೊಳಿಸಲಿದ್ದಾರೆ.
ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್ ಅವರು ಸಿಇಟಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳ ವಿವರಗಳು ಮತ್ತು ಪರೀಕ್ಷೆಯಲ್ಲಿ ತೇರ್ಗಡೆಯಾದ ಶೇಕಡಾವಾರು ಮಾಹಿತಿಗಳನ್ನು ನೀಡಲಿದ್ದಾರೆ.
ಪರೀಕ್ಷೆ ಫಲಿತಾಂಶವನ್ನು ಅಭ್ಯರ್ಥಿಗಳು ಮಧ್ಯಾಹ್ನ 2 ಗಂಟೆಯ ಬಳಿಕ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ ಸೇರಿದಂತೆ
https://t.co/TLplrLc0qv
https://t.co/7q9hak7Y9z
https://x.com/CMofKarnataka
https://x.com/drmcsudhakar
https://x.com/KEA_karnataka
ಈ ಲಿಂಕ್ಗಳಲ್ಲಿ ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಕಳೆದ ತಿಂಗಳ ಏಪ್ರಿಲ್ 16 ಮತ್ತು 17 ರಂದು ಸಿಇಟಿ ಪ್ರವೇಶ ಪರೀಕ್ಷೆಗಳನ್ನು ನಡೆಸಲಾಗಿತ್ತು. ದ್ವಿತೀಯ ಪಿಯುಸಿ ಪರೀಕ್ಷೆ -2ರ ಫಲಿತಾಂಶ ಘೋಷಣೆ ಬಳಿಕ ಸಿಇಟಿ ಫಲಿತಾಂಶ ಪ್ರಕಟಿಸುವ ನಿರ್ಧಾರವನ್ನು ಕೆಇಎ ಮಾಡಿದ್ದು, ಅದರಂತೆ ಶನಿವಾರ ಸಿಇಟಿ ರಿಸಲ್ಟ್ ಅನ್ನು ಪ್ರಕಟಿಸುತ್ತಿದೆ.
ಸಿಇಟಿ ಪರೀಕ್ಷೆಯನ್ನು ಒಟ್ಟು 3 ಲಕ್ಷದ 11 ಸಾವಿರ ಬರೆದಿದ್ದರು. ಶೇಕಡಾ 94.20ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.