ಬೆಳ್ತಂಗಡಿ: ದಕ್ಷಿಣ ಕನ್ನಡ , ಉಡುಪಿ ಜಿಲ್ಲೆ ಸೇರಿದಂತೆ ಹಲವೆಡೆ ಭಾರೀ ಮಳೆ ಸುರಿಯುತ್ತಿದ್ದು, ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಕರಾವಳಿಯಲ್ಲಿ ಚಂಡ ಮಾರುತದ ಭೀತಿ ಎದುರಾಗಿದೆ.ದಕ್ಷಿಣ ಕನ್ನಡ ಉಡುಪಿ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೇ 28 ರವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. 45 ರಿಂದ 55 ಕಿ ಮೀ ವೇಗದಲ್ಲಿ ಗಾಳಿ ಬೀಸುವ ಸಂಭವ ಇರುವುದರಿಂದ ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚಿಸಲಾಗಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಕಳೆದ ರಾತ್ರಿಯಿಂದ ಭಾರೀ ಮಳೆ ಸುರಿಯುತಿದ್ದು ನದಿಗಳಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ. ಇಂದು ಕೂಡ ಭಾರೀ ಮಳೆಯಾಗುವ ಸಂಭವ ಇರುವುದರಿಂದ ಮುನ್ನೆಚ್ಚರಿಕೆ ವಹಿಸುವಂತೆ ತಾಲೂಕು ಮಟ್ಟದ ಅಧಿಕಾರಿಗಳಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ.