ಬೆಂಗಳೂರು: ಸ್ಪೀಕರ್ ಯು.ಟಿ.ಖಾದರ್ ನೇತೃತ್ವದಲ್ಲಿ ಇಂದು ನಡೆದ ಸಭೆಯಲ್ಲಿ 18 ಬಿಜೆಪಿ ಶಾಸಕರ ಅಮಾನತು ಆದೇಶವನ್ನು ವಾಪಸ್ ಪಡೆಯಲು ತೀರ್ಮಾನಿಸಲಾಗಿದೆ. ಕಳೆದ ಅಧಿವೇಶನದಲ್ಲಿ ಸದನದಿಂದ ಅಮಾನತ್ತಾದ 18 ಶಾಸಕರಿಗೆ ಕೊನೆಗೂ ಗುಡ್ ನ್ಯೂಸ್ ಸಿಕ್ಕಿದ್ದು, ಎರಡು ತಿಂಗಳ ನಂತರ ಅಮಾನತು ಆದೇಶ ವಾಪಸ್ ಪಡೆಯಲಾಗಿದೆ.
ಭಾನುವಾರ ಸಂಜೆ ವಿಧಾನಸೌಧದಲ್ಲಿ ಸ್ಪೀಕರ್ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಸಭಾಪತಿ ರುದ್ರಪ್ಪ ಲಮಾಣಿ, ವಿಪಕ್ಷ ನಾಯಕ ಆರ್.ಅಶೋಕ್ ಮತ್ತಿತರರು ಸಭೆ ನಡೆಸಿ, ಈ ಬಗ್ಗೆ ಚರ್ಚೆ ನಡೆಸಿದ ಬಳಿಕ ಅಮಾನತು ಆದೇಶ ವಾಪಸ್ ಪಡೆಯುವ ನಿರ್ಣಯ ಕೈಗೊಳ್ಳಲಾಯಿತು.