ಬೆಳ್ತಂಗಡಿ: ಹವಾಮಾನ ಇಲಾಖೆಯ ಮಾಹಿತಿಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತಿದ್ದು, ಅದೇ ರೀತಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಂಭವ ಇರುವುದಿಂದ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು (ಮೇ 30) ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ಈಗಾಗಲೇ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.