ಗುಜರಾತ್:ಅಹಮದಾಬಾದ್ ನಲ್ಲಿ ಮಧ್ಯಾಹ್ನ ನಡೆದ ಭೀಕರ ವಿಮಾನ ದುರಂತದಲ್ಲಿ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಸಾವನ್ನಪ್ಪಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.242 ಪ್ರಯಾಣಿಕರಿದ್ದ ಏರ್ ಇಂಡಿಯ ವಿಮಾನವು
ಅಹಮದಾಬಾದ್ ನಿಂದ ಲಂಡನ್ ಗೆ ತೆರಳುತಿದ್ದ ವೇಳೆ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಮೇಘನಿನಗರ ಎಂಬಲ್ಲಿಯ ಮೆಡಿಕಲ್ ಕಾಲೇಜೊಂದರ ಹಾಸ್ಟೆಲ್ ಕಟ್ಟಡದ ಮೇಲೆ ವಿಮಾನ ಡಿಕ್ಕಿ ಹೊಡೆದು ನೆಲಕ್ಕಪ್ಪಳಿಸಿ ಪತನಗೊಂಡಿದೆ. ಈ ವಿಮಾನದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸೇರಿದಂತೆ 242 ಮಂದಿ ದುರಂತಕ್ಕೆ ಬಲಿಯಾಗಿದ್ದಾರೆ.ಅದಲ್ಲದೇ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ನಲ್ಲಿ ಊಟಕ್ಕೆ ಕುಳಿತಿದ್ದ 20 ವಿದ್ಯಾರ್ಥಿಗಳು ಸಾವನ್ನಪ್ಪಿ ಹಲವಾರು ಮಂದಿ ಗಂಭೀರ ಗಾಯಗೊಂಡಿರುವ ಬಗ್ಗೆಯೂ ವರದಿಗಳು ಪ್ತಸಾರವಾಗುತ್ತಿದೆ.