ಬೆಳ್ತಂಗಡಿ; ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾವೊಂದು ಪಲ್ಟಿಯಾಗಿ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಗುರುವಾಯನಕೆರೆ ಬಳಿಯ ಬದ್ಯಾರ್ ಎಂಬಲ್ಲಿ ಆದಿತ್ಯವಾರ ನಡೆದಿದೆ.
ಮೃತ ವ್ಯಕ್ತಿ ಮಾಲಾಡಿ ನಿವಾಸಿ ಶಿವಾನಂದ ಪಿ ಮಾಳವ (33) ಎಂಬವರಾಗಿದ್ದು,
ಗುರುವಾಯನಕೆರೆಯಿಂದ ಅಳದಂಗಡಿ ಗೆ ಪ್ರಯಾಣಿಸುತ್ತಿದ್ದ ವೇಳೆ ಆಟೋ ರಿಕ್ಷಾ ಅಪಘಾತಕ್ಕೀಡಾಗಿದ್ದು ಈ ವೇಳೆ ರಿಕ್ಷಾದಲ್ಲಿದ್ದ ಯುವಕ ಗಂಭೀರವಾಗಿ ಗಾಯಗೊಂಡಿದ್ದು ಇವರನ್ನು ಸ್ಥಳೀಯರ ಸಹಕಾರದೊಂದಿಗೆ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ದರೂ ಆವೇಳೆಗೆ ಅವರು ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ. ಆಟೋದಲ್ಲಿದ್ದ ಇನ್ನೊಬ್ಬರು ಗಾಯಗೊಂಡಿದ್ದು ಆವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.