ಬೆಳ್ತಂಗಡಿ:ಗುರುವಾಯನಕೆರೆಯಿಂದ ಉಪ್ಪಿನಂಗಡಿ ಹೋಗುವ ಹೆದ್ದಾರಿಯಲ್ಲಿ ಮಳೆಗೆ ಭಾರೀ ಗಾತ್ರದ ಹೊಂಡಗಳು ಬಿದ್ದು ವಾಹನ ಸಂಚಾರಕ್ಕೆ ಅನಾನುಕೂಲವಾಗಿತ್ತಲ್ಲದೇ ವಾಹನ ಸವಾರರು, ಸಾರ್ವಜನಿಕರು ತುಂಬಾ ತೊಂದರೆ ಅನುಭವಿಸುವಂತಾಗಿತ್ತು.
ಮಳೆ ಸ್ವಲ್ಪ ಕಡಿಮೆಯಾದ ಬೆನ್ನಲ್ಲೇ ಗುಂಡಿ ಮುಚ್ಚುವ ಕಾಮಗಾರಿ ಪ್ರಾರಂಭವಾಗಿದೆ. ನಿನ್ನೆ ಜುಲೈ 05
ಕುಪ್ಪೆಟ್ಟಿ-ಕಲ್ಲೇರಿ-ಉಪ್ಪಿನಂಗಡಿ ಮುಖ್ಯ ರಸ್ತೆ ಸಂಚಾರಕ್ಕೆ ಯೋಗ್ಯವಿಲ್ಲದೆ ನರಕ ಯಾತನೆ ಅನುಭವಿಸುತ್ತಿರುವ ಸಮಸ್ಯೆ ಬಗ್ಗೆ
ಬಿಜೆಪಿ ಬೆಳ್ತಂಗಡಿ ಮಂಡಲ ಕಣಿಯೂರು ಮಹಾಶಕ್ತಿ ಕೇಂದ್ರ ವತಿಯಿಂದ
ಕಲ್ಲೇರಿ ಬಸ್ ನಿಲ್ದಾಣದ ಬಳಿ ರಸ್ತೆ ಹಾಗೂ ಇನ್ನಿತರ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಬಿಡುಗಡೆ ಮಾಡದ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.