ತುಮಕೂರು: ಖಾಸಗಿ ವಸತಿಗೃಹದಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ದಾವಣಗೆರೆ ನಗರದ ಬಡಾವಣೆ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ನಾಗರಾಜಪ್ಪ ಆತ್ಮಹತ್ಯೆ ಮಾಡಿಕೊಂಡವರು.
ಪಿಎಸ್ಐ ನಾಗರಾಜಪ್ಪ ಜುಲೈ 1ರಂದು ತುಮಕೂರು ನಗರದ ದ್ವಾರಕಾ ಲಾಡ್ಜ್ನ 4ನೇ ಮಹಡಿಯಲ್ಲಿ ರೂಮ್ ಬಾಡಿಗೆ ಪಡೆದಿದ್ದರು. ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಇಂದು (ಭಾನುವಾರ) ಬೆಳಗ್ಗೆ ಬೆಳಕಿಗೆ ಬಂದಿದೆ.
ಕೊಠಡಿಯಲ್ಲಿ ಬಾಂಡ್ ಪೇಪರ್ನಲ್ಲಿ ವಿಲ್ ಬರೆದಿಟ್ಟಿದ್ದಾರೆ. ಮೊಬೈಲ್ ಸೇರಿದಂತೆ, ಡೆತ್ನೋಟ್ ಮತ್ತು ಬಾಂಡ್ ಪೇಪರ್ ವಶಕ್ಕೆ ಪಡೆಯಲಾಗಿದೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ