ಉಜಿರೆ ವಿವಾಹಿತೆ ಮಹಿಳೆ ನೇಣುಬಿಗಿದುಕೊಂಡು ಆತ್ಮಹತ್ಯೆ:

 

 

 

ಬೆಳ್ತಂಗಡಿ : ವಿವಾಹಿತೆ ಮಹಿಳೆಯೊಬ್ಬರು ತನ್ನ  ತಾಯಿ ಮನೆಯಲ್ಲಿ ನೇಣಿಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜು 12 ರಂದು  ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ದರ್ಖಾಸ್ ನಿವಾಸಿ ದೇವಪ್ಪ ಬಂಗೇರ ಮತ್ತು ರಾಧ ದಂಪತಿಗಳ ದ್ವಿತೀಯ ಪುತ್ರಿ ರಮ್ಯ(32) ಮನೆಯ ಕೋಣೆಯಲ್ಲಿ ಜು 12 ರಂದು ಮಧ್ಯಾಹ್ನ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

 

 

ಎರಡು ವರ್ಷದ ಹಿಂದೆ ಕೊಯ್ಯೂರು ಗ್ರಾಮದ ಪಾದಡ್ಕ ನಿವಾಸಿ ಲತೀಶ್ ಗೆ ಮದುವೆ ಮಾಡಿಕೊಡಲಾಗಿತ್ತು. ರಮ್ಯ ಬೆಳ್ತಂಗಡಿ ಮುಗುಳಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರಿಗೆ ಅನಾರೋಗ್ಯ ಕಾಡುತ್ತಿದ್ದು. ತಾಯಿ ಮನೆಗೆ ಬಂದಿದ್ದ ರಮ್ಯ ಇದರಿಂದ  ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಮೃತದೇಹವನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದ್ದು. ಸ್ಥಳಕ್ಕೆ ಬೆಳ್ತಂಗಡಿ ಕಂದಾಯ ಇಲಾಖೆಯ ಕಂದಾಯ ಇನ್ಸ್ಪೆಕ್ಟರ್ ಪ್ರತೀಷ್ ಮತ್ತು ಬೆಳ್ತಂಗಡಿ ಪೊಲೀಸರು ಭೇಟಿ ನೀಡಿದ್ದು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅತ್ಮಹತ್ಯೆ ಪ್ರಕರಣ ದಾಖಲಾಗಿದೆ.

error: Content is protected !!