ಎಐ ಮೂಲಕ ಸುಳ್ಳು ಮಾಹಿತಿಗಳ ಕಾಲ್ಪನಿಕ ವಿಡಿಯೋ ಪ್ರಸಾರ: ಯೂಟ್ಯೂಬರ್ ಸಮೀರ್ ಎಂ.ಡಿ. ವಿರುದ್ಧ ಪ್ರಕರಣ ದಾಖಲು:

 

 

 

ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಿರುವುದರ ಬಗ್ಗೆ ಸಾಕ್ಷಿ ದೂರುದಾರ ನೀಡಿರುವ ದೂರಿನ ಬಗ್ಗೆ ಕಾಲ್ಪನಿಕವಾಗಿ ಎ.ಐ ಮೂಲಕ ಸೃಷ್ಟಿಸಲಾದ ಸುಳ್ಳು ಮಾಹಿತಿಗಳನ್ನೊಳಗೊಂಡ ವೀಡಿಯೋ ಬಹಿರಂಗಪಡಿಸಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ ಬಗ್ಗೆ ಯುಟ್ಯೂಬರ್ ಸಮೀರ್ ಎಂ.ಡಿ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರ ದಾಖಲಿಸಲಾಗಿದೆ.

 

 

 

 

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ದೂರುದಾರರು ತನ್ನ ದೂರಿನಲ್ಲಿ ಹಾಗೂ ನ್ಯಾಯಾಲಯದ ಮುಂದೆ
ಬಹಿರಂಗಪಡಿಸಿರುವ ಮಾಹಿತಿಗಳನ್ನು ಹೊರತುಪಡಿಸಿ ಸಾಕ್ಷಿ ದೂರುದಾರರ ಬಗ್ಗೆ ಹಾಗೂ ಪ್ರಕರಣದ ಬಗ್ಗೆ ಇತರ ಹೆಚ್ಚಿನ ಮಾಹಿತಿಯಿರುವ ಕಾಲ್ಪನಿಕವಾಗಿ ಎ.ಐ ಮೂಲಕ ಸೃಷ್ಟಿಸಲಾದ ಸುಳ್ಳು ಮಾಹಿತಿಗಳಿರುವ ವೀಡಿಯೋವನ್ನು ಯುಟ್ಯೂಬ್ ನಲ್ಲಿ ಪ್ರಸಾರ ಮಾಡಿ ಉದ್ದೇಶ ಪೂರ್ವಕವಾಗಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ ಹಿನ್ನಲೆಯಲ್ಲಿ ಸಮೀರ್ ಎಂಡಿ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಜುಲೈ11 ರಂದು ಕಲಂ 192,240,353(1)(b)ಬಿಎನ್.ಎಸ್ ನಂತೆ ಪ್ರಕರಣ ದಾಖಲಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

error: Content is protected !!