ಕೊಕ್ಕಡ ಆನೆ ದಾಳಿಗೆ ವ್ಯಕ್ತಿ ಸಾವು:

 

 

ಬೆಳ್ತಂಗಡಿ: ಸೌತಡ್ಕ ಗುಂಡಿ ಎಂಬಲ್ಲಿ ಗೇರು ಪ್ಲಾಂಟೇಶನ್ ನಲ್ಲಿ ಜುಲೈ 17 ರಂದು ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಅದನ್ನು ಓಡಿಸುವ ಸಂದರ್ಭದಲ್ಲಿ ಓರ್ವ ವ್ಯಕ್ತಿ ಆನೆ ದಾಳಿಗೆ ಬಲಿಯಾದ ಘಟನೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಕೊಕ್ಕೆ ಸಮೀಪ ಸೌತಡ್ಕ ಗುಂಡಿ ಎಂಬಲ್ಲಿ ಗೇರು ಪ್ಲಾಂಟೇಶನ್ ನಲ್ಲಿ ಘಟನೆ ನಡೆದಿದ್ದು. ಮೃತ ವ್ಯಕ್ತಿ ಸೌತಡ್ಕದ ನಿವಾಸಿ ಬಾಲಕೃಷ್ಣ ಶೆಟ್ಟಿ (70)ಎಂದು ತಿಳಿದುಬಂದಿದೆ.
ಕಾಡಾನೆಯ ಹಿಂಡು ಈ ಪ್ರದೇಶದಲ್ಲಿ ಓಡಾಟ ನಡೆಸಿದ್ದು ಇದನ್ನು ಗಮನಿಸಿದ ಸ್ಥಳೀಯರು ಆನೆಯನ್ನು ಓಡಿಸುವ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ ಹೆಚ್ವಿನ ಮಾಹಿತಿಗಳು ಇನ್ನಷ್ಟೆ ತಿಳಿದು ಬರಬೇಕಾಗಿದೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಮತ್ತು ಉಪ್ಪಿನಂಗಡಿ ಅರಣ್ಯ ಇಲಾಖೆ ಅಧಿಕಾರಿಗಳು ದೌಡಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

error: Content is protected !!