ಬೆಳ್ತಂಗಡಿ : ತೆಕ್ಕಾರು ಗ್ರಾಮದ ಬಾಜಾರು ಎಂಬಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಮನೆಯ ಮುಂಭಾಗದಲ್ಲಿ ಚೂರಿಯಿಂದ ಇರಿದು ಹತ್ಯೆ ಮಾಡಿದ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮ ಬಾಜಾರು ನಿವಾಸಿ ಪತಿ ರಫೀಕ್(45) ಎಂಬಾತ ಪತ್ನಿ ಝೀನತ್(38) ಎಂಬಾಕೆಯ ಜೊತೆ ಜುಲೈ 17 ರಂದು ಬೆಳಗ್ಗೆ 8:30 ಗಂಟೆಗೆ ಕ್ಷುಲ್ಲಕ ವಿಚಾರದಲ್ಲಿ ಗಲಾಟೆ ಮಾಡಿದ ಬಳಿಕ ಚೂರಿಯಿಂದ ಇರಿದಿದ್ದಾನೆ. ತಕ್ಷಣ ಸ್ಥಳೀಯರು ಸೇರಿ ಆಸ್ಪತ್ರೆಗೆ ದಾಖಲಿಸಿದ್ರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಕೊಲೆ ಮಾಡಿದ ಆರೋಪಿ ರಫೀಕ್ ಕೂಲಿ ಕೆಲಸ ಮಾಡುತ್ತಿದ್ದು. ರಫೀಕ್ ಮತ್ತು ಝೀನತ್ ಮದುವೆಯಾಗಿ 18 ವರ್ಷವಾಗಿದ್ದು ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಝೀನತ್ ಮೃತದೇಹ ಪುತ್ತೂರು ಆಸ್ಪತ್ರೆಗೆ ಶವಪರೀಕ್ಷೆಗಾಗಿ ಸಾಗಿಸಲಾಗಿದೆ. ಗಲಾಟೆ ವೇಳೆ ಆರೋಪಿ ರಫೀಕ್ ಗೆ ತಲೆಗೆ ಗಾಯವಾಗಿದ್ದು ಬಂಟ್ವಾಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ವೇಳೆ ಉಪ್ಪಿನಂಗಡಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಘಟನೆ ಬಗ್ಗೆ ಪುತ್ತೂರು ಡಿವೈಎಸ್ಪಿ ,ಉಪ್ಪಿನಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರವಿ.ಬಿ.ಎಸ್, ಸಬ್ ಇನ್ಸ್ಪೆಕ್ಟರ್ ಅವಿನಾಶ್, ಸಬ್ ಇನ್ಸ್ಪೆಕ್ಟರ್ ಕೌಶಿಕ್ ಮತ್ತು ತಂಡ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.