ಕೊಕ್ಕಡ ಆನೆ ದಾಳಿಗೆ ವ್ಯಕ್ತಿ ಸಾವು ಪ್ರಕರಣ: ಅರಣ್ಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ:

 

 

ಬೆಳ್ತಂಗಡಿ: ಕೊಕ್ಕಡ ಗ್ರಾಮದ ಸೌತಡ್ಕ ಗುಂಡಿ ಎಂಬಲ್ಲಿ ಕಾಡಾನೆಗಳು ತಿರುಗಾಡುತ್ತಿದ್ದು ಅದನ್ನು ಕಾಡಿಗೆ ಓಡಿಸುವ ಸಂದರ್ಭದಲ್ಲಿ, ಸೌತಡ್ಕ ನಿವಾಸಿ ಬಾಲಕೃಷ್ಣ ಶೆಟ್ಟಿ ಎಂಬವರು ಆನೆ ದಾಳಿಗೆ ಬಲಿಯಾಗಿದ್ದು. ಈ ಬಗ್ಗೆ ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ರಕ್ಷಿತ್ ಶಿವರಾಂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿ ಮಾಡಿ “ಆನೆ-ಮಾನವ ಸಂಘರ್ಷದಿಂದ, ತಾಲೂಕಿನಲ್ಲಿ ಹೆಚ್ಚಿನ ನಷ್ಟ ಹಾಗೂ ಸಾವು ಸಂಭವಿಸುತ್ತಿದ್ದು, ನಿಯಂತ್ರಣಕ್ಕೆ ಸರ್ಕಾರ ಸಕಲ ರೀತಿಯ, ಪ್ರಯತ್ನ ಮಾಡುವಂತೆ, ಹಾಗೂ ದಾಳಿಯಿಂದ ಮೃತಪಟ್ಟ ಕುಟುಂಬದವರಿಗೆ ಗರಿಷ್ಠ ಪ್ರಮಾಣದ ಪರಿಹಾರವನ್ನು ನೀಡಬೇಕೆಂದು ಮನವಿಯನ್ನು ಸಲ್ಲಿಸಿದರು ಮನವಿ ಸಚಿವರ ಪೂರಕವಾಗಿ ಸ್ಪಂದಿಸುವ ಭರವಸೆ ನೀಡಿದರು.

error: Content is protected !!