ಮೈಸೂರು: ದರ್ಮಸ್ಥಳ ಪ್ರಕರಣದ ಬಗ್ಗೆ ಸರ್ಕಾರ ಕಾನೂನು ಕ್ರಮ ತೆಗೆದುಕೊಳ್ಳಲಿದೆ.ಎಂದು ಸಿ.ಎಂ. ಸಿದ್ದರಾಮಯ್ಯ ಹೇಳಿದ್ದಾರೆ , ಅವರು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾದ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡುತ್ತಾ
ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿ ಹತ್ತು ವರ್ಷಗಳ ನಂತರ ಬಂದು ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ ಎಸ್ಐಟಿ ತನಿಖೆಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಪ್ರಕರಣದ ತನಿಖೆಯ ವಿಷಯದಲ್ಲಿ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯದೇ, ಕಾನೂನು ರೀತಿಯ ಕ್ರಮ ಕೈಗೊಳ್ಳಲಿದೆ” ಎಂದು ಹೇಳಿದರು.