ಧರ್ಮಸ್ಥಳ ಹೆಣ ಹೂತು ಹಾಕಿದ ಪ್ರಕರಣ: ವಿಶೇಷ ತನಿಖಾ ತಂಡ ರಚಿಸಿದ ರಾಜ್ಯ ಸರ್ಕಾರ: ಐಪಿಎಸ್ ಅಧಿಕಾರಿ ಪ್ರಣವ್ ಮೊಹಂತಿ ನೇತೃತ್ವದ ಎಸ್ಐಟಿ ತಂಡ:

 

 

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿರುವುದಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ವ್ಯಕ್ತಿಯೊಬ್ಬ ದೂರು ನೀಡಿ ಬೆಳ್ತಂಗಡಿ ಕೋರ್ಟ್ ನಲ್ಲಿ ಹೇಳಿಕೆ ನೀಡಿದ ಸಂಬಂಧ ಇದೀಗ ವಿಶೇಷ ತನಿಖಾ ತಂಡ(SIT) ಕ್ಕೆ ವರ್ಗಾಯಿಸಿ ಜುಲೈ 19 ರಂದು ಮಾನ್ಯ ಕರ್ನಾಟಕ ಸರ್ಕಾರವು ಅದೇಶಿಸಿರುತ್ತದೆ.

ಶೀಘ್ರದಲ್ಲೇ ವಿಶೇಷ ತನಿಖಾ ತಂಡವು ಪ್ರಕರಣವನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲಿದೆ ಎಂದು ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ತಿಳಿಸಿದ್ದಾರೆ.

ವಿಶೇಷ ತನಿಖಾ ಸಂಸ್ಥೆ(SIT) ಯ ಮುಖ್ಯಸ್ಥರಾಗಿ ಐಪಿಎಸ್ ಪ್ರಣವ ಮೋಹಾಂತಿ ಹಾಗೂ ಸದಸ್ಯರಾಗಿ ಐಪಿಎಸ್ ಗಳಾದ ಎಂ.ಎನ್.ಅನುಚೇತ್, ಸೌಮ್ಯಲತ, ಜಿತೇಂದ್ರ ಕುಮಾರ್ ದಯಾಮ ರವರನ್ನು ಸರಕಾರ ನೇಮಿಸಿದೆ.

error: Content is protected !!