ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಜೀಪೊಂದು ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದ ಘಟನೆ ಬೆಳಾಲು ದೊಂಪದ ಪಲ್ಕೆ (ಮೀನಂದೇಲು) ಬಳಿ ಸೋಮವಾರ ಸಂಜೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ದೊಂಪದಪಲ್ಕೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಜೀಪ್ ಚರಂಡಿಗೆ ಉರುಳಿದ್ದು ಅವಘಡದಲ್ಲಿ ಬಂದಾರು ಗ್ರಾಮದ ಬೈಪಾಡಿ ಸಮೀಪದ ನಿವಾಸಿ ಭಾರತೀಯ ಸೇನಾ ಯೋಧ ಲಿಂಗಪ್ಪ ಎಂಬವರು ಗಾಯಗೊಂಡಿದ್ದಾರೆ.
ರಜೆಯಲ್ಲಿರುವ ಸೇನಾ ಯೋಧ ಲಿಂಗಪ್ಪ ಅವರು ಜೀಪಿನಲ್ಲಿ ಹೋಗಿ ಬರುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿದ ಪರಿಣಾಮ ಜೀಪ್ ಉರುಳಿ ಅಪಘಾತ ಸಂಭವಿಸಿದೆ.
ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.