ಮದುವೆಯಾಗಿ ಹನಿಮೂನಿಗೆ ಬಂದ ದಂಪತಿಗಳು: ವರದಕ್ಷಿಣೆ ಕಿರುಕುಳ ನೀಡಿ ಪತ್ನಿಯ ಕೊಲೆಗೆ ಯತ್ನಿಸಿದ ಪತಿ ಜೈಲುಪಾಲು:

 

 

 

ಬೆಳ್ತಂಗಡಿ : ಮದುವೆಯಾಗಿ ಹನಿಮೂನಿಗಾಗಿ ಆಗಮಿಸಿ ಲಾಡ್ಜ್ ನಲ್ಲಿ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಪತಿ ಜೈಲುಪಾಲಾದ ಘಟನೆ  ನಡೆದಿದೆ.

ಬೆಂಗಳೂರಿನ ದಕ್ಷಿಣದದ ರಾಮನಗರ ಜಿಲ್ಲೆಯ ಬಿಡದಿ ತಾಲೂಕಿನ ನಿವಾಸಿ ಅಂತಿಮ‌ ವರ್ಷದ ಕಾನೂನು ವಿದ್ಯಾರ್ಥಿಯಾಗಿರುವ ವಿಶ್ವನಾಥ್ ಎಂಬವರು 22 ವರ್ಷದ ಯುವತಿಯೊಂದಿಗೆ
ಮೇ ತಿಂಗಳ 22 ನೇ ತಾರೀಕು ಮದುವೆಯಾಗಿದ್ದು,

ಜುಲೈ 22 ರಂದು ರಾತ್ರಿ ಬೆಳ್ತಂಗಡಿ ತಾಲೂಕಿನ ಉಜಿರೆಯ ಲಾಡ್ಜ್ ಗೆ ಬಂದು ರೂಂ ಪಡೆದು ತಂಗಿದ್ದರು. ರೂಂ ನಲ್ಲಿ ಜುಲೈ 22 ರಂದು ರಾತ್ರಿಯೆ ಕುಡಿದ ಮತ್ತಿನಲ್ಲಿ ಪತ್ನಿಗೆ ವರದಕ್ಷಿಣೆಗಾಗಿ ಕಿರುಕುಳ ನೀಡಿ ಕೊಲೆಗೆ ಯತ್ನಿಸಿರುವ ಬಗ್ಗೆ ಪತಿ ವಿರುದ್ಧ ಪತ್ನಿ ನೇರ ಬೆಳ್ತಂಗಡಿ ಪೊಲೀಸ್ ಠಾಣೆಗೆ ಜು23 ರಂದು ಸಂಜೆ ದೂರು ನೀಡಿದ್ದಾಳೆ.
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪತಿ ವಿಶ್ವನಾಥ ವಿರುದ್ಧ BNS 109,115(1), 85 ,4DP
(ಕೊಲೆಯತ್ನ, ಕೈಯಿಂದ ಹಲ್ಲೆ, ಕೌಟುಂಬಿಕ ದೌರ್ಜನ್ಯ, ವರದಕ್ಷಿಣೆ ಬೇಡಿಕೆ ಕಿರುಕುಳ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ವಿಶ್ವನಾಥ್ (24) ನನ್ನು ಜುಲೈ 24 ರಂದು ಉಜಿರೆಯಲ್ಲಿ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ್ ನೇತೃತ್ವದ ಸಿಬ್ಬಂದಿಗಳು
ಬಂಧಿಸಿ ಬೆಳ್ತಂಗಡಿ ಹೆಚ್ಚುವರಿ ವ್ಯವಹಾರಿಕ ನ್ಯಾಯಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಸಂದೇಶ್.ಕೆ ಮುಂದೆ ಹಾಜರುಪಡಿಸಿದ್ದು ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ‌ ಆದೇಶಿಸಿದ್ದಾರೆ..

error: Content is protected !!