ಸುಳ್ಯ: ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮಡಿಕೇರಿ ತಾಲೂಕಿನ ದೇವರಕೊಲ್ಲಿ ಹೆದ್ದಾರಿಯ ಕೊಯನಾಡು ಎಂಬಲ್ಲಿ ಶುಕ್ರವಾರ ಸಂಭವಿಸಿದೆ.
ಕೊಡಗು ಜಿಲ್ಲೆಯ ಗೋಣಿಕೊಪ್ಪಲಿನ ಮಾರುಕಟ್ಟೆ ರಸ್ತೆಯ ನಿವಾಸಿಗಳಾದ ನಿಹಾದ್, ರಿಸ್ವಾನ್, ರಾಶಿಬ್ ಮತ್ತು ರಿಶು ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಾರು ಉಳ್ಳಾಲದಿಂದ ಕೊಡಗು ಕಡೆಗೆ ತೆರಳುತ್ತಿದ್ದ ವೇಳೆ ಕೊಯನಾಡು ಎಂಬಲ್ಲಿ ಅಪಘಾತ ಸಂಭವಿಸಿದೆ. ಘಟನೆಯ ಪರಿಣಾಮ ಕಾರಿನಲ್ಲಿದ್ದ ನಾಲ್ವರಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ