ಬೆಳ್ತಂಗಡಿ : ಎಸ್.ಐ.ಟಿ ಕಚೇರಿಗೆ ಆಗಮಿಸಿದ ಆಸ್ಪತ್ರೆಯ ವೈದ್ಯರು  ಗುರುತು ಮಾಡಿದ ಸ್ಥಳದಿಂದ  ಅಸ್ಥಿಪಂಜರಗಳನ್ನು ಹೊರತೆಗೆಯುವ ಕಾರ್ಯಾಚರಣೆ

 

 

 

ಬೆಳ್ತಂಗಡಿ :  ಧರ್ಮಸ್ಥಳ ಗ್ರಾಮದಲ್ಲಿ  ಹಲವಾರು ಮೃತದೇಹ ಹೂತು ಹಾಕಿದ ಬಗ್ಗೆ ವ್ಯಕ್ತಿಯೊಬ್ಬ ನೀಡಿದ ದೂರಿನ  ಪ್ರಕರಣಕ್ಕೆ  ಸಂಬಂಧಿಸಿದಂತೆ  ಜುಲೈ 29 ರಂದು ದೂರುದಾರನ ಸಮ್ಮುಖದಲ್ಲಿ ಎಸ್.ಐ.ಟಿ ಅಧಿಕಾರಿಗಳು ಹಾಗೂ ಇತರ ಅಧಿಕಾರಿಗಳಿಂದ ಅಸ್ಥಿಪಂಜರ ಹೊರತೆಗೆಯುವ ಕಾರ್ಯಾಚರಣೆ ನಡೆಯಲಿದೆ ಎಂದು ಎಸ್.ಐ.ಟಿ ಯ ಉನ್ನತ ಮೂಲಗಳು ಮಾಹಿತಿ ನೀಡಿದೆ‌.

ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಮಂಗಳೂರು KMC ಆಸ್ಪತ್ರೆಯ ಇಬ್ಬರು ನುರಿತ ವೈದ್ಯರಾದ ಡಾ.‌ಜಗದೀಶ್ ರಾವ್ ಮತ್ತು ಡಾ.ರಶ್ಮಿ ತಂಡ ಕೂಡ ಎಸ್.ಐ.ಟಿ ಆದೇಶದ ಮೇರೆಗೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆಗಮಿಸಿ ಅಸ್ಥಿಪಂಜರ ಹೊರತೆಗೆಯುವ ಕಾರ್ಯಾಚರಣೆಗೆ ತಯಾರಿ ಮಾಡುತ್ತಿದ್ದಾರೆ. ನಿನ್ನೆ ನೇತ್ರಾವತಿ ಸ್ನಾನ ಘಟ್ಟ ಸಮೀಪದ ಅರಣ್ಯ ಪ್ರದೇಶದಲ್ಲಿ ಸುಮಾರು 13 ಕಡೆಗಳಲ್ಲಿ ಮುಸುಕುಧಾರಿ ವ್ಯಕ್ತಿ ತೋರಿಸಿದ ಸ್ಥಳಗಳನ್ನು ಮಾರ್ಕ್ ಮಾಡಲಾಗಿದ್ದು, ಇವತ್ತು ಅದನ್ನು ಅಗೆಯುವ ಪ್ರಕ್ರಿಯೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

error: Content is protected !!