ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: 6 ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರದ ಕುರುಹು ಪತ್ತೆ..

 

 

 

 

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂರನೇ ದಿನದ ಕಾರ್ಯಾಚರಣೆಯಲ್ಲಿ ಎಸ್ಐಟಿ ಅಧಿಕಾರಿಗಳು ವಿವಿಧ ಇಲಾಖೆಯ ಅಧಿಕಾರಿಗಳು ಸೇರಿದಂತೆ 66 ಜನ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ. ಭಾರೀ ಮಳೆಯಿಂದಾಗಿ ಶೋಧ ಕಾರ್ಯಕ್ಕೆ ಅಡ್ಡಿಯಾಗುತಿದ್ದು, 6 ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರ ದ ಅವಶೇಷ ಸಿಕ್ಕಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.ಅವಶೇಷಗಳನ್ನು ಸಂಗ್ರಹಿಸುವ ಕೆಲಸ ನಡೆಯುತ್ತಿದೆ. ದೂರುದಾರ ತೋರಿಸಿದ 13 ಪಾಯಿಂಟ್ ಗಳ ಸ್ಥಳದ 5 ಕಡೆಗಳಲ್ಲಿ ಯಾವುದೇ ಕುರುಹು ಸಿಕ್ಕಿರಲಿಲ್ಲ , 6 ನೇ ಸ್ಥಳದ ಶೋಧ ಕಾರ್ಯದ ವೇಳೆ ಕುರುಹು ಪತ್ತೆಯಾಗಿರುವ ಮಾಹಿತಿ ಬಂದಿದೆ.

error: Content is protected !!