ಬೆಳ್ತಂಗಡಿ : ಧರ್ಮಸ್ಥಳ ಕ್ಷೇತ್ರದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂಬ ಕಾರಣಕ್ಕೆ ಆ.6 ರಂದು ಸಂಜೆ ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ಬಳಿ ನಾಲ್ಕು ಮಂದಿ ಯೂಟ್ಯೂಬರ್ ಮೇಲೆ ಹಲ್ಲೆ ನಡೆಸಿ ಕ್ಯಾಮರ ಹಾಗೂ ವಾಹನಗಳಿಗೆ ಹಾನಿ ಮಾಡಿ ಜೀವ ಬೆದರಿಕೆ ಒಡ್ಡಿದ ಪ್ರಕರಣ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 189(2),191(2),115(2),324(5),352,307 ಜೊತೆಗೆ 190 BNS ಅಡಿಯಲ್ಲಿ ಸುಮಾರು 15 ರಿಂದ 50 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಗ್ರಾಮ ಕನ್ಯಾಡಿ ನಿವಾಸಿ ಜೀಪು ಚಾಲಕ ಸೋಮನಾಥ ಸಪಲ್ಯ(48) ನನ್ನು ಆ.7 ರಂದು ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸಮರ್ಥ್ ಆರ್ ಗಾಣಿಗೇರಾ ನೇತೃತ್ವದ ತಂಡ ಬಂಧಿಸಿ ಸಂಜೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.