ಬೆಳ್ತಂಗಡಿ : ಧರ್ಮಸ್ಥಳ ಕ್ಷೇತ್ರದ ಕುರಿತು ನಿರಂತರ ಅಪಪ್ರಚಾರ ಮಾಡಲಾಗುತ್ತಿದೆ ಎಂಬ ಹಿನ್ನೆಲೆಯಲ್ಲಿ ಆ.17 ರಂದು ರವಿವಾರ ಬೆಳಗ್ಗೆ ರಾಜ್ಯ ಬಿಜೆಪಿ ನಿಯೋಗ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕರು, ಬಿಜೆಪಿಯ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು, ಪಕ್ಷದ ವಿವಿಧ ಪದಾಧಿಕಾರಿಗಳು ಭೇಟಿ ನೀಡಿ ದೇವರ ದರ್ಶನ ಪಡೆದು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಈ ವೇಳೆ ವಿಜಯೇಂದ್ರ ಮಾತನಾಡಿ, ಬಿಜೆಪಿಯು ಎಸ್ ಐಟಿ ತನಿಖೆಯನ್ನು ಬಿಜೆಪಿಯು ಪ್ರಾರಂಭದಲ್ಲೇ ಸ್ವಾಗತಿಸಿದ್ದು, ಅದರ ಮಧ್ಯಂತರ ವರದಿಯನ್ನು ಸರಕಾರ ಮಂಡಿಸಬೇಕು ಎಂದು ಸದನದಲ್ಲಿ ಆಗ್ರಹಿಸಲಾಗಿದೆ. ಕ್ಷೇತ್ರದ ಅಪಪ್ರಚಾರ ಮಾಡುವ ಕುರಿತು ಕೂಡ ಸರಕಾರ ಸಮಗ್ರವಾಗಿ ತನಿಖೆ ನಡೆಸುವ ಕಾರ್ಯವನ್ನು ಮಾಡಬೇಕು, ತನಿಖೆಯ ಭರದಲ್ಲಿ ಕ್ಷೇತ್ರದ ಬಗ್ಗೆ ಅಪಪ್ರಚಾರ ಸಲ್ಲದು, ಅಸಂಖ್ಯಾತ ಭಕ್ತರಲ್ಲಿ ಗೊಂದಲ ಸೃಷ್ಟಿಸುವ ಷಡ್ಯಂತ್ರ ನಡೆಯುತ್ತಿದೆ. ಭಾರತೀಯ ಜನತಾ ಪಾರ್ಟಿ ರಾಜಕಾರಣ ಮಾಡುತ್ತಿಲ್ಲ
ಅಪಪ್ರಚಾರಕ್ಕೆ ಕಡಿವಾಣ ಹಾಕದೇ ರಾಜ್ಯ ಸರ್ಕಾರ ಅಪರಾಧವನ್ನು ಎಸಗಿದ.ಅದ್ದರಿಂದ ರಾಜ್ಯದ ಜನತೆಯಲ್ಲಿ ಮುಖ್ಯ ಮಂತ್ರಿಗಳು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.