ಬೆಳ್ತಂಗಡಿ: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಅವರ ಮುನ್ಸೂಚನೆಯಂತೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಚಂಡ ಮಾರುತ ಬೀಸುವ ಸಂಭವ ಇರುವುದರಿಂದ ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದ್ದು ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ಪ್ರಾಥಮಿಕ , ಪ್ರೌಢ ಶಾಲೆ ಸರ್ಕಾರಿ ಅನುದಾನಿತ ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ 18 ಸೋಮವಾರ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.