ಬೆಳ್ತಂಗಡಿ : ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಟ್ಯೂಬರ್ ಸಮೀರ್ ಎಂ.ಡಿ ಅವರಿಗೆ ಮಂಗಳೂರಿನ ನ್ಯಾಯಾಲಯವು ನಿರೀಕ್ಷಣಾ ಜಾಮಿನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ.
ಸಮೀರ್ ನನ್ನು ಬಂಧಿಸಲು ಧರ್ಮಸ್ಥಳ ಪೊಲೀಸರು ಬೆಂಗಳೂರಿಗೆ ತೆರಳಿದ್ದರೂ ಈತ ಮನೆಯಲ್ಲಿ ಇರದ ಕಾರಣ ವಶಕ್ಕೆ ಪಡೆಯಲು ಸಾಧ್ಯವಾಗಿರಲಿಲ್ಲ ಇದೀಗ ಆತನಿಗೆ ಮಂಗಳೂರಿನ ಜಿಲ್ಲಾ ಸತ್ರ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಇದರದಾಗಿ ಸಮೀರ್ ಗೆ ಬಂಧನ ಭೀತಿಯಿಂದ ತಪ್ಪಿಸಿಕೊಂಡಂತಾಗಿದೆ.