ಧರ್ಮಸ್ಥಳ ವಿರುದ್ಧ ಅಪಪ್ರಚಾರ, ರಾಜ್ಯ ಸರ್ಕಾರದ ಧೋರಣೆಗೆ ಖಂಡನೆ: ಧರ್ಮದ ಉಳಿವಿಗೆ “ಧರ್ಮ ಯುದ್ಧ” ರಾಜ್ಯದೆಲ್ಲೆಡೆ ಹೋರಾಟ,ಬಿಜೆಪಿ ಘೋಷಣೆ:

 

 

 

ಬೆಂಗಳೂರು: ಧರ್ಮಸ್ಥಳದ ಅಪಪ್ರಚಾರದ  ವಿಚಾರವಾಗಿ ರಾಜ್ಯ ಸರ್ಕಾರದ ಧೋರಣೆಯನ್ನು ಖಂಡಿಸಿ “ಧರ್ಮದ ಉಳಿವಿಗಾಗಿ ಧರ್ಮ ಯುದ್ಧ” ಹೋರಾಟವನ್ನು ಬಿಜೆಪಿ  ಮಾಡಲಿದೆ  ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಈ ಬಗ್ಗೆ  ಮಾತನಾಡಿದ ಅವರು, “ಧರ್ಮಸ್ಥಳದ ವಿಚಾರವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಸಚಿವ ದಿನೇಶ್ ಗುಂಡೂರಾವ್ ಅವರು ನೀಡಿರುವ ಹೇಳಿಕೆಗಳು ಎಲ್ಲರಿಗೂ ತಿಳಿದಿದೆ. ಧರ್ಮಸ್ಥಳದ ವಿರುದ್ಧ ಅಪಪ್ರಚಾರದ ವಿಚಾರವಾಗಿ ರಾಜ್ಯ ಸರ್ಕಾರದ ನಡವಳಿಕೆ ಬಗ್ಗೆ ನಮಗೂ ಅನುಮಾನಗಳು ಕಾಡುತ್ತಿವೆ” ಎಂದು ಹೇಳಿದರು.

“ರಾಜ್ಯ ಸರ್ಕಾರದ ಈ ಧೋರಣೆಯನ್ನು ಖಂಡಿಸಿ “ಧರ್ಮದ ಉಳಿವಿಗಾಗಿ ಧರ್ಮ ಯುದ್ಧ” ಪ್ರತಿಭಟನೆಯನ್ನು ನಾಳೆಯಿಂದ ಒಂದು ವಾರದವರೆಗೂ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಮಾಡಲಿದ್ದೇವೆ” ಎಂದು ಘೋಷಿಸಿದರು.

error: Content is protected !!