ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣ: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ:

 

 

 

 

 

 

ಉಡುಪಿ: ಪೊಲೀಸರ ವಾಹನಕ್ಕೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿತರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

*ಪ್ರಕರಣ:* ಆ. 21 ರಂದು ಬ್ರಹ್ಮಾವರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 177/2025 ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ರವರನ್ನು ಉಜಿರೆ ನಿವಾಸದಿಂದ ವಶಕ್ಕೆ ಪಡೆದುಕೊಂಡು ಉಡುಪಿ ಜಿಲ್ಲೆಯ ಬ್ರಹ್ಮಾವರ ಠಾಣೆಗೆ ಕರೆತರುತ್ತಿರುವಾಗ ಅವರ ಬೆಂಬಲಿಗರು ಪೊಲೀಸ್ ವಾಹನಗಳನ್ನು ಹಿಂಬಾಲಿಸಿಕೊಂಡು ಬಂದಿದ್ದು ಎಷ್ಟು ಬಾರಿ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಬಂದು ಕರ್ತವ್ಯಕ್ಕೆ ಅಡ್ಡಿ ಪಡಿಸಬೇಡಿ ಎಂದು ಸೂಚನೆ ನೀಡಿದರೂ ಪಾಲಿಸದೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸ್ಮಾರ್ ಹೆದ್ದಾರಿಯಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸುವಂತೆ ಬಂದು ಸದ್ರಿ ತಂಡದಲ್ಲಿದ್ದ ಉಡುಪಿ ಜಿಲ್ಲೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಇಲಾಖಾ ವಾಹನ ನಂಬರ್ KA20G0669 ವಾಹನಕ್ಕೆ ಗುದ್ದಿ ಆರೋಪಿತರನ್ನು ಪ್ರಕರಣದಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗದಂತೆ ಅಡ್ಡಿಪಡಿಸಿದ್ದು, ಈ ಕುರಿತಂತೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ ಕ್ರ 99/2025 ಕಲಂ 132, 121(1), 281, 3(5) ಬಿ ಎನ್ ಎಸ್ 2023 ಮತ್ತು ಕಲಂ 3 KPDL Act ರಂತೆ ಪ್ರಕರಣ ದಾಖಲಾಗಿದೆ.

ಪ್ರಕರಣದಲ್ಲಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಉಜಿರೆ ನಿವಾಸಿಗಳಾದ ಸೃಜನ್ ಎಲ್ , ಹಿತೇಶ್ ಶೆಟ್ಟಿ, ಸಹನ್ ಎಂಬವರನ್ನು ಬಂಧಿಸಿ ಕಾರ್ಕಳ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯ ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.ಅದರಂತೆ ಮೂವರನ್ನು ಕೂಡ ಉಡುಪಿಯ ಹಿರಿಯಡ್ಕ ಜೈಲಿಗೆ ಕಳುಹಿಸಲಾಗಿದೆ. ಜೊತೆಗೆ ಆರೋಪಿತರು ಕೃತ್ಯಕ್ಕೆ ಬಳಿಸಿ KA-70-M-3048 ಬಿಳಿ ಬಣ್ಣದ ಶಿಫ್ಟ್ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

error: Content is protected !!