ಯೂಟ್ಯೂಬ್ ಸಂದರ್ಶನಗಳಲ್ಲಿ ಚಿನ್ನಯ್ಯ ಸೌಜನ್ಯ ಬಗ್ಗೆ ಹೇಳಿಕೆ :ತನಿಖೆಗಾಗಿ ಎಸ್ಐಟಿಗೆ ದೂರು ನೀಡಿದ ಸೌಜನ್ಯ ತಾಯಿ ಕುಸುಮಾವತಿ:

 

 

 

 

ಬೆಳ್ತಂಗಡಿ; ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಬಗ್ಗೆ ತನಿಖೆ ನಡೆಸುತ್ತಿರುವ ಎಸ್.ಐ.ಟಿ ಕಚೇರಿಗೆ ಆಗಮಿಸಿದ ಸೌಜನ್ಯ ತಾಯಿ ಕುಸುಮಾವತಿ ಅವರು ಎಸ್.ಐ.ಟಿ ಅಧಿಕಾರಿಗಳಿಗೆ ಗುರುವಾರ ದೂರು ನೀಡಿದ್ದು ದೂರನ್ನು ಸ್ವೀಕರಿಸಿದ ಅಧಿಕಾರಿಗಳು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹಿಂಬರಹ ನೀಡಿದ್ದಾರೆ.
ಅತ್ಯಾಚಾರಕ್ಕೆ ಈಡಾಗಿ ಕೊಲೆಯಾದ ಸೌಜನ್ಯ ತಾಯಿ ಕುಸುಮಾವತಿ ಹಾಗೂ ಮನೆಯವರು ಗುರುವಾರ ಮಧ್ಯಾಹ್ನ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದು‌ಅಧಿಕಾರಿಗಳ ಸೂಚನೆಯ ಮೇರೆಗೆ ಆರಂಭದಲ್ಲಿ ಅಲ್ಲಿಂದ ಹಿಂತಿರುಗಿದ್ದರು. ಆದರೆ ಬಳಿಕ ಅಧಿಕಾರಿಗಳ ಸೂಚನೆಯಂತೆ ಸೌಜನ್ಯ ತಾಯಿ ಕುಸುಮಾವತಿ ಎಸ್.ಐ.ಟಿ ಕಚೇರಿಗೆ ಬಂದು ದೂರನ್ನು ನೀಡಿದ್ದಾರೆ.

ಸಾಕ್ಷಿದೂರು ದಾರನಾಗಿ ಬಂದ ಚೆನ್ನಯ್ಯ ಯುಟ್ಯೂಬರ್ ಗಳಿಗೆ ನೀಡಿದ ಸಂದರ್ಶನದಲ್ಲಿ ಸೌಜನ್ಯ ಪ್ರಕರಣದ‌ಬಗ್ಗೆ ಹಲವು ಹೇಳಿಕೆಗಳನ್ನು ನೀಡಿದ್ದ ಈ ಹಿನ್ನಲೆಯಲ್ಲಿ ಈಬಗ್ಗೆ ತನಿಖೆ ನಡೆಸುವಂತೆ ದೂರು ನೀಡಿರುವುದಾಗಿ ತಿಳಿದು ಬಂದಿದೆ ದೂರಿನ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೆ ತಿಳಿದು ಬರಬೇಕಾಗಿದೆ.

error: Content is protected !!