ಉಡುಪಿ: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ವಾಹನಕ್ಕೆ ಡಿಕ್ಕಿ ಹೊಡೆದ ಪ್ರಕರಣ ಸಂಬಂಧ ಮೂವರು ಆರೋಪಿಗಳಾದ ಉಜಿರೆ ನಿವಾಸಿಗಳಾದ ಸೃಜನ್ ಎಲ್ , ಹಿತೇಶ್ ಶೆಟ್ಟಿ, ಸಹನ್ ಗೆ ಉಡುಪಿ ನ್ಯಾಯಾಲಯ ಆ.28 ರಂದು ಜಾಮೀನು ಮಂಜೂರು ಮಾಡಿದೆ.
ಆ. 21 ರಂದು ಬ್ರಹ್ಮಾವರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 177/2025 ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ರವರನ್ನು ಉಜಿರೆ ನಿವಾಸದಿಂದ ವಶಕ್ಕೆ ಪಡೆದುಕೊಂಡು ಉಡುಪಿ ಜಿಲ್ಲೆಯ ಬ್ರಹ್ಮಾವರ ಠಾಣೆಗೆ ಕರೆತರುತ್ತಿರುವಾಗ ಅವರ ಬೆಂಬಲಿಗರು ಪೊಲೀಸ್ ವಾಹನಗಳನ್ನು ಹಿಂಬಾಲಿಸಿಕೊಂಡು ಬಂದಿದ್ದು ಎಸ್ಟೇ ಬಾರಿ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಬಂದು ಕರ್ತವ್ಯಕ್ಕೆ ಅಡ್ಡಿ ಪಡಿಸಬೇಡಿ ಎಂದು ಸೂಚನೆ ನೀಡಿದರು ಪಾಲಿಸದೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸ್ಮಾರ್ ಹೆದ್ದಾರಿಯಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸುವಂತೆ ಬಂದು ಸದ್ರಿ ತಂಡದಲ್ಲಿದ್ದ ಉಡುಪಿ ಜಿಲ್ಲೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಇಲಾಖಾ ವಾಹನ ನಂಬರ್ KA-20-G-0669 ವಾಹನಕ್ಕೆ KA-70-M-3048 ಬಿಳಿ ಬಣ್ಣದ ಶಿಫ್ಟ್ ಕಾರು ಡಿಕ್ಕಿ ಹೊಡೆದು ಆರೋಪಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪ್ರಕರಣದಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗದಂತೆ ಅಡ್ಡಿಪಡಿಸಿದ್ದರಿಂದ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಗನ್ ಮ್ಯಾನ್ ಅ ಕ್ರ 99/2025 ಕಲಂ 132, 121(1), 281, 3(5) ಬಿ ಎನ್ ಎಸ್ 2023 ಮತ್ತು ಕಲಂ 3 KPDL Act ರಂತೆ ಆ
21 ರಂದು ಪ್ರಕರಣ ದಾಖಲಾಗಿತ್ತು.
ಪ್ರಕರಣದಲ್ಲಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಉಜಿರೆ ನಿವಾಸಿಗಳಾದ ಸೃಜನ್ ಎಲ್ , ಹಿತೇಶ್ ಶೆಟ್ಟಿ, ಸಹನ್ ಎಂಬವರನ್ನು ಬಂಧಿಸಿ ಕಾರ್ಕಳ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯ ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ಆ.28 ರಂದು ಉಡುಪಿ ಕೋರ್ಟ್ ನಿಂದ ಮೂವರಿಗೂ ಜಾಮೀನು ಮಂಜೂರು ಮಾಡಲಾಗಿದ್ದು. ಮೂವರವನ್ನು ಉಡುಪಿ ಜೈಲಿನಿಂದ ಸಂಜೆ ಬಿಡುಗಡೆ ಮಾಡಲಾಗಿದೆ.