ಬೆಂಗಳೂರಿನ ಯೂಟ್ಯೂಬರ್ ಮನೆಗೆ ಬೆಳ್ತಂಗಡಿ ಪೊಲೀಸ್ ದಾಳಿ:

 

 

 

ಬೆಳ್ತಂಗಡಿ : ಎಐ ವಿಡಿಯೋ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಯೂಟ್ಯೂಬರ್ ಸಮೀರ್.ಎಂ.ಡಿ ಪೊಲೀಸರಿಗೆ ಸರಿಯಾಗಿ ತನಿಖೆಗೆ ಸಹಕರಿಸದ ಹಿನ್ನಲೆಯಲ್ಲಿ ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಮತ್ತು ತಂಡ ಎಫ್.ಎಸ್.ಎಲ್ ವಿಭಾಗದ ಸೋಕೊ ಸಿಬ್ಬಂದಿ ಜೊತೆಯಲ್ಲಿ ಸೆ.4 ರಂದು ಮದ್ಯಾಹ್ನ 1:40 ಕ್ಕೆ ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಹುಳ್ಳಹಲ್ಲಿಯಲ್ಲಿರುವ ಬಾಡಿಗೆ ಮನೆಗೆ ಬೆಳ್ತಂಗಡಿ ನ್ಯಾಯಾಲಯದಿಂದ ಸೆ.3 ರಂದು ಸರ್ಚ್ ವಾರಂಟ್ ಪಡೆದು ದಾಳಿ ನಡೆಸಿದ್ದಾರೆ.

ಪ್ರಕರಣದಲ್ಲಿ ವಿಡಿಯೋ ಮಾಡಲು ಬಳಸಿದ ಕಂಪ್ಯೂಟರ್ ಮತ್ತು ಮೊಬೈಲ್ ಫೋನ್ ಆತನ ಮನೆಯಿಂದ ಜಪ್ತಿ ಮಾಡಿ ತನಿಖೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

error: Content is protected !!