ಬೆಳ್ತಂಗಡಿ : ಚಾರ್ಮಾಡಿ ಘಾಟ್ ನಲ್ಲಿ ಮೂರು ವಾಹನಗಳ ನಡುವೆ ಅಪಘಾತ ನಡೆದಿದ್ದು. ಹಲವಾರಿಗೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ಸೆ.7 ರಂದು ಬೆಳಗ್ಗೆ 9 ಗಂಟೆಗೆ ಉಜಿರೆಯಿಂದ ಮೂಡಿಗೆರೆ ಕಡೆ ಪ್ರಯಾಣ ಮಾಡುತ್ತಿದ್ದ ಸರಕಾರಿ ಬಸ್ ಗೆ ಮೂಡಿಗೆರೆಯಿಂದ ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿ ಡಿಕ್ಕಿ ಹೊಡೆದಿದ್ದು ಬಳಿಕ ಲಾರಿಗೆ ಹಿಂಬದಿಯಲ್ಲಿ ಬರುತ್ತಿದ್ದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಹಲವು ಮಂದಿಗೆ ಸಣ್ಣಪುಟ್ಟ ಗಾಯವಾಗಿದ್ದು. ರಸ್ತೆ ಸಂಚಾರಕ್ಕೆ ತೊಂದರೆಯಾದಾಗ ಸಾಅರ್ವಜನಿಕರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.