ಬೆಳ್ತಂಗಡಿ: ಸಾಧನೆಯ ಛಲ ಇದ್ದರೆ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದು ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ ಹೇಳಿದರು. ಅವರು ಸೆ 14 ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ನಡೆದ ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ
ಜಾಗತಿಕ ಬಂಟರ ಸಂಘಗಳ ಒಕ್ಕೂಟ , ಮಂಗಳೂರು.
ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು,
ಶ್ರೀಮತಿ ಕಾಶಿ ಶೆಟ್ಟಿ ಮತ್ತು ಮಕ್ಕಳು ನವಶಕ್ತಿ ಗುರುವಾಯನಕೆರೆ,ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಗುರುವಾಯನಕೆರೆ,ಬಂಟರ ಸಂಘ ಬೆಂಗಳೂರು,
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ ಸಹಭಾಗಿತ್ವದಲ್ಲಿ ನಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ, ಪ್ರತಿಭಾ ಪುರಸ್ಕಾರ,ಮತ್ತು ಸಾಧಕರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ದೊಡ್ಡ ಮಟ್ಟದಲ್ಲಿ ಸಮಾಜದ ವಿದ್ಯಾರ್ಥಿಗಳಿಗೆ ಅರ್ಥಿಕ ಸಹಕಾರ ನೀಡುವ ಮೂಲಕ ಅವರ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವುದು ಶ್ಲಾಘನೀಯ ಕೆಲಸ ಎಂದ ಅವರು ವಿದ್ಯಾರ್ಥಿಗಳು ಕೂಡ ಉತ್ತಮ ಸಾಧನೆಗೈದು ಯಶಸ್ಸು ಗಳಿಸಿ ಉನ್ನತ ವ್ಯಕ್ತಿಗಳಾಗಿ ಬಾಳಬೇಕು ಎಂದು ಶುಭ ಹಾರೈಸಿದರು. ಬೆಳ್ತಂಗಡಿ ಬಂಟರ ಭವನದ ಸಾಲ ತೀರಿಸುವ ಉದ್ದೇಶದಿಂದ ಕಳೆದ ಒಂದು ವರ್ಷಗಳ ಹಿಂದೆ ಸಾಲಮುಕ್ತ ಅಭಿಯಾನ ಪ್ರಾರಂಭಿಸಿದ್ದು ಈಗಾಗಲೇ ಹಲವರು ಇದಕ್ಕೆ ಕೈ ಜೋಡಿಸಿದ್ದಿರಿ, ಉಳಿದಂತೆ ಬಾಕಿ ಇರುವ ಸಾಲದ ಮೊತ್ತವನ್ನು ನಾನು ಭರಿಸುವ ಮೂಲಕ ಬೆಳ್ತಂಗಡಿ ತಾಲೂಕು ಬಂಟರ ಸಂಘ ಸಾಲ ಮುಕ್ತಗೊಂಡಿದೆ ಎಂದು ಘೋಷಿಸಿದರು.ಈ ವೇಳೆ ಸಭೆಯಲ್ಲಿದ್ದವರೆಲ್ಲರೂ ಎದ್ದು ನಿಂತು ಸಂತೋಷದಿಂದ ಅವರಿಗೆ ಅಭಿನಂದನೆ ಸಲ್ಲಿಸಿದರು.