ಬೆಳ್ತಂಗಡಿ: ರಸ್ತೆ ಬದಿ ಕಸ ಬಿಸಾಡಿ ಹೋದವರನ್ನು ಪತ್ತೆ ಹಚ್ಚಿ ಅವರಿಗೆ ದಂಡ ವಿಧಿಸಿ ಅವರಿಂದಲೇ ಕಸ ವಿಲೇವಾರಿ ಮಾಡಿಸಿದ ಘಟನೆ ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸೆ ,16 ಮಂಗಳವಾರ ನಡೆದಿದೆ.ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆರ್ಕೆ ಎಂಬಲ್ಲಿ ವಾಹನವೊಂದರಲ್ಲಿ ಕಸವನ್ನು ತಂದು ರಸ್ತೆ ಬದಿ ಸುರಿದು ಹೋಗಿದ್ದು ಇದನ್ನು ಗಮನಿಸಿದ ಸ್ಥಳೀಯರು ಲಾಯಿಲ ಗ್ರಾಮ ಪಂಚಾಯತ್ ಗೆ ಮಾಹಿತಿ ನೀಡಿದ್ದು ಈ ಬಗ್ಗೆ ಸ್ಪಂದಿಸಿದ ಪಂಚಾಯತ್ ಲೆಕ್ಕ ಸಹಾಯಕಿ ಸುಪ್ರಿತಾ ಶೆಟ್ಟಿ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಬೆಳ್ತಂಗಡಿ ನಗರ ವ್ಯಾಪ್ತಿಯ ವ್ಯಕ್ತಿಯೊಬ್ಬರ ಮನೆಯಿಂದ ತಂದು ಹಾಕಿದ ಕಸ ಎಂಬ ಮಾಹಿತಿ ಸಿಕ್ಕಿದ್ದು ಈ ಬಗ್ಗೆ ಅವರನ್ನು ಸಂಪರ್ಕಿಸಿ ಸ್ಥಳಕ್ಕೆ ಬರುವಂತೆ ಸೂಚಿಸಿ ದಂಡ ವಿಧಿಸಿ ಎಚ್ಚರಿಕೆ ನೀಡಿ ಅವರಿಂದಲೇ ಕಸ ವಿಲೇವಾರಿ ಮಾಡಿಸಿದ್ದಾರೆ ಎಂದು ತಿಳಿದು ಬಂದಿದೆ. ತಕ್ಷಣ ಸ್ಪಂದಿಸಿ ಸೂಕ್ತ ಕ್ರಮ ಕೈಗೊಂಡು ತಪ್ಪಿತಸ್ಥರಿಗೆ ದಂಡ ವಿಧಿಸಿದ ಪಂಚಾಯತ್ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.