ಧರ್ಮಸ್ಥಳ ಬುರುಡೆ ಪ್ರಕರಣದ ಚಿನ್ನಯ್ಯನ ಜಾಮೀನು ಅರ್ಜಿ ವಜಾ:

 

 

 

ಬೆಳ್ತಂಗಡಿ :  ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣದಲ್ಲಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಚಿನ್ನಯ್ಯನ ಜಾಮೀನು ಅರ್ಜಿ ಸೆ.16 ಕ್ಕೆ ವಜಾಗೊಂಡಿದೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತುಹಾಕಿರುವುದಾಗಿ ಹೇಳಿ ಬುರುಡೆ ಜೊತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ ಬಳಿಕ ಹಲವಾರು ಬೆಳವಣಿಗಳು ನಡೆದಿದ್ದವು.

ಬೆಳ್ತಂಗಡಿ ಎಸ್‌‌‌ಐಟಿ ಅಧಿಕಾರಿಗಳು ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 23 ರಂದು ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ 12 ದಿನಗಳ ಕಾಲ ಕಸ್ಟಡಿಗೆ ಪಡೆದ ತನಿಖೆ ನಡೆಸಿ ಸೆ.3 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಆರೋಪಿ ಚಿನ್ನಯ್ಯನನ್ನು ಮತ್ತೆ ಮೂರು ದಿನಗಳ ಕಾಲ ಕಸ್ಟಡಿಗೆ ಪಡೆದು ಹೆಚ್ಚಿನ ತನಿಖೆ ನಡೆಸಿ ಸೆ.6 ರಂದು ಸಂಜೆ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು‌. ಸದ್ಯ ಆರೋಪಿ ಚಿನ್ನಯ್ಯ ಶಿವಮೊಗ್ಗ ಜೈಲಿನಲ್ಲಿದ್ದಾನೆ.

ಚಿನ್ನಯ್ಯ ಪರ ಜಿಲ್ಲಾ ಉಚಿತ ಕಾನೂನು ಸೇವೆಗಳ ಪ್ರಾಧಿಕಾರದಿಂದ ವಕೀಲರನ್ನು ಪಡೆದುಕೊಂಡು ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ಸೆ.12 ಕ್ಕೆ ಜಾಮೀನು ಅರ್ಜಿ ವಾದ ವಿವಾದ ಮಾಡಿ ಸೆ.16 ಕ್ಕೆ ಜಾಮೀನು ಅರ್ಜಿ ಆದೇಶಕ್ಕೆ ನಿಗದಿಪಡಿಸಿದ್ದರು.

ಆರೋಪಿ ಚಿನ್ನಯ್ಯನ ಪ್ರಕರಣ ಗಂಭೀರವಾಗಿದ್ದು, ಪ್ರಕರಣದ ತನಿಖೆ ಜಿಲ್ಲಾ ಸೆಕ್ಷನ್ ಕೋರ್ಟ್ ಅಗಿದ್ದು‌‌. ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಇನ್ನೂ ಹೆಚ್ಚಿನ ತನಿಖೆ ಮಾಡುವ ಅವಶ್ಯಕತೆ ಇದೆ ಎಂದು ಸೆ.16 ರಂದು ಬೆಳ್ತಂಗಡಿ ಹೆಚ್ಚುವರಿ ವ್ಯವಹಾರಿಕ ನ್ಯಾಯಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳಾದ ವಿಜಯೇಂದ್ರ .ಟಿ.ಹೆಚ್ ಜಾಮೀನು ಅರ್ಜಿ ವಜಾ ಮಾಡಿ ಆದೇಶ ಮಾಡಲಾಗಿದೆ.

error: Content is protected !!