ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಸಿಕ್ಕ ಅಸ್ಥಿಪಂಜರವೊಂದರ ಗುರುತು ಪತ್ತೆ ಹಚ್ಚಿದ ಅಧಿಕಾರಿಗಳು:

 

 

 

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ನೇತ್ರಾವತಿ ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಏಳು ಅಸ್ಥಿಪಂಜರ ಪತ್ತೆಯಾದ ಪ್ರಕರಣದಲ್ಲಿ ಒಂದು ಅಸ್ಥಿಪಂಜರದ ಗುರುತನ್ನು ಐಡಿ ಕಾರ್ಡ್ ಮೂಲಕ ಪತ್ತೆ ಹಚ್ಚಿದ ಎಸ್.ಐ.ಟಿ ಅಧಿಕಾರಿಗಳು.

ಕೊಡುಗು ಜಿಲ್ಲೆ ಪೊನ್ನಂಪೇಟೆ ತಾಲೂಕಿನ ಟೊ.ಶೆಟ್ಟಿಗೇರಿ ಗ್ರಾಮದ ಯು.ಬಿ.ಅಯ್ಯಪ್ಪ (70) ಎಂಬವರ ಅಸ್ಥಿಪಂಜರ ಎಂದು ಎಸ್.ಐ.ಟಿ ದೃಢ ಪಡಿಸಿದೆ. ಅಸ್ಥಿಪಂಜರದ ಜೊತೆ ಇದ್ದ ಐಡಿ ಕಾರ್ಡ್ ಮೂಲಕ ಗುರುತು ಪತ್ತೆ ಹಚ್ಚಲಾಗಿದೆ.

ಮೈಸೂರು ಆಸ್ಪತ್ರೆಗೆ ಚಿಕಿತ್ಸೆಗೆ ಹೋದ ಅಯ್ಯಪ್ಪ ನಾಪತ್ತೆಯಾದ ಬಗ್ಗೆ ಕಟ್ಟು ಪೊಲೀಸ್ ಠಾಣೆಯಲ್ಲಿ ಕುಟುಂಬ ಸದಸ್ಯರು ಪ್ರಕರಣ ದಾಖಲಿಸಿದ್ದರು ಎಂದು ತನಿಖೆಯಲ್ಲಿ ಬಯಲಾಗಿದೆ.

error: Content is protected !!