ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ: ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆ ಅಭಿವೃದ್ಧಿಗೆ ₹ 50 ಲಕ್ಷ ಬಿಡುಗಡೆ:

 

 

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರ ಮನವಿಗೆ ರಾಜ್ಯ ಸರ್ಕಾರ ಸ್ಪಂದಿಸಿದೆ.ಬೆಳ್ತಂಗಡಿ  ತಾಲೂಕು ಸಾರ್ವಜನಿಕ ಆಸ್ಪತ್ರೆಯ ಅಭಿವೃದ್ಧಿಗೆ ₹ 50 ಲಕ್ಷ ಅನುದಾನವನ್ನು  ರಾಜ್ಯ ಸರ್ಕಾರ ಬಿಡುಗಡೆಗೊಳಿಸಿದೆ.
ಬೆಳ್ತಂಗಡಿ ತಾಲೂಕಿನ ಪ್ರಮುಖ ಸಾರ್ವಜನಿಕ ಆಸ್ಪತ್ರೆ ಇದಾಗಿದ್ದು, ದಿನಂಪ್ರತಿ ಡಯಾಲಿಸಿಸ್, ಸೇರಿದಂತೆ ವಿವಿಧ ಸಮಸ್ಯೆಗಳಿಗಾಗಿ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಆಸ್ಪತ್ರೆಗೆ ಭೇಟಿ ನೀಡುತಿದ್ದಾರೆ. ಅದರೆ ಆಸ್ಪತ್ರೆಯಲ್ಲಿ ಹಲವಾರು ಸಮಸ್ಯೆಗಳಿಂದ ಸಾರ್ವಜನಿಕರಿಗೆ ತೊಂದರೆ ಅನುಭವಿಸುತ್ತಿದ್ದರು. ಈ ಬಗ್ಗೆ ಮಂಗಳೂರಿನಲ್ಲಿ ನಡೆದ ಜಿಲ್ಲಾ ಕೆಡಿಪಿ ಸಭೆಯಲ್ಲಿ ಆಸ್ಪತ್ರೆಯ ಶವಾಗಾರ ಹಾಗೂ ಇನ್ನಿತರ ಸ್ಥಿತಿ ಗತಿಗಳ ಬಗ್ಗೆ ಶಾಸಕ ಹರೀಶ್ ಪೂಂಜ ಉಸ್ತುವಾರಿ ಸಚಿವರ ಗಮನಕ್ಕೆ ತಂದ್ದು ಆಸ್ಪತ್ರೆಯಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಲು ತಕ್ಷಣ ಅನುದಾನವನ್ನು ಮಂಜೂರು ಗೊಳಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು. ಈ ಬಗ್ಗೆ ಸ್ಪಂದಿಸಿದ ಸರ್ಕಾರ ಆಸ್ಪತ್ರೆ ಕಟ್ಟಡ ಹಾಗೂ ವಸತಿಗೃಹಗಳ ದುರಸ್ಥಿ ಕೆಲಸಗಳಿಗೆ ಅನುದಾನ ಬಿಡುಗಡೆಗೊಳಿಸಿದೆ.ತುರ್ತಾಗಿ ಶವಾಗಾರದ ಕಾಮಗಾರಿ ಆಗಬೇಕಾಗಿರುವುದರಿಂದ ಅದರ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

error: Content is protected !!