ವಿವಿಧ ಪ್ರಕರಣದ ಹಿನ್ನೆಲೆ ಮಹೇಶ್ ಶೆಟ್ಟಿ ತಿಮರೋಡಿ ಜಿಲ್ಲೆಯಿಂದ ಒಂದು ವರ್ಷ ಗಡಿಪಾರು ಆದೇಶ:

 

 

 

ಬೆಳ್ತಂಗಡಿ : ಹಲವಾರು ಪ್ರಕರಣದ ಸಂಬಂದ  ವಿವಿಧ ಠಾಣೆಗಳಲ್ಲಿ ಪ್ರಕರಣ ಗಳು ದಾಖಲಾಗಿದ್ದು  ಈ ಹಿನ್ನೆಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ಒಂದು ವರ್ಷ  ಜಿಲ್ಲೆಯಿಂದ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.

ಪುತ್ತೂರು ಸಹಾಯಕ ಆಯುಕ್ತರಾದ(ಎಸಿ) ಸ್ಟೆಲ್ಲಾ ವರ್ಗಿಸ್ ಗೆ ಬೆಳ್ತಂಗಡಿ ಪೊಲೀಸರು ಪ್ರಕರಣದ ಬಗ್ಗೆ ವರದಿ ನೀಡಿದ್ದನ್ನು ಪರಿಶೀಲನೆ ನಡೆಸಿ ವರದಿಯ ಆಧಾರದಲ್ಲಿ ಸೆ.18 ರಂದು ಮಹೇಶ್ ಶೆಟ್ಟಿ ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷಗಳ ಅವಧಿಗೆ ಗಡೀಪಾರು ಮಾಡಿ ಆದೇಶಿಸಿದ್ದಾರೆ.

ಗಡಿಪಾರು ಮಾಡಿದ ಆದೇಶ ಪ್ರತಿ ಬಂಟ್ವಾಳ ಉಪವಿಭಾಗ ಡಿವೈಎಸ್ಪಿಗೆ ಬಂದ ಬಳಿಕ ಗಡಿಪಾರು ಮಾಡುವ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.

error: Content is protected !!